ಕಲಾಪಕ್ಕೆ ಕುಣಿಕೆ ಬಿಗಿಯುವ ಹೀನ ರಾಜಕಾರಣ ನಿಲ್ಲಲಿ : ಹೆಚ್ಡಿಕೆ

ಬೆಂಗಳೂರು, ಫೆ.18-ರಾಜ್ಯ ವಿಧಾನ ಮಂಡಲದ ಅಧಿವೇಶನದ ಕಲಾಪಕ್ಕೆ ಕುಣಿಕೆ ಬಿಗಿಯುವ ಹೀನ ರಾಜಕಾರಣ ನಿಲ್ಲಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಜನರು ಕಷ್ಟದಲ್ಲಿದ್ದಾರೆ. ಕೋವಿಡ್‌ನಿಂದ ಅವರ ಬದಕಿನ ಬವಣೆ ಹೆಚ್ಚಾಗಿ ರೋಸಿ ಹೋಗಿದ್ದಾರೆ. ಅವರು ರೊಚ್ಚಿಗೇಳುವ ಮುನ್ನ ಆಡಳಿತಾರೂಢ ಬಿಜೆಪಿ ಮತ್ತು ಅಧಿಕೃತ ಪ್ರತಿಪಕ್ಷ ಕಾಂಗ್ರೆಸ್‌ ಎಚ್ಚೆತ್ತುಕೊಂಡು ತಮ್ಮ ಜನವಿರೋಧಿ ನೀತಿ ಬದಲಿಸಿಕೊಳ್ಳಬೇಕು ಒತ್ತಾಯಿಸಿದ್ದಾರೆ. ಕಳೆದೆರಡು ದಿನಗಳ ವಿಧಾನಮಂಡಲ ಕಲಾಪ ರಾಜಕೀಯ ಪ್ರತಿಷ್ಠೆಗೆ ಆಹುತಿಯಾಗಿದೆ. ಬೆಳಗಾವಿ ಕಲಾಪವನ್ನು ಬಲಿ […]