ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬಿಗ್ ರಿಲೀಫ್, ಜಾಮೀನು ಮಂಜೂರು

ಬೆಂಗಳೂರು,ಮಾ.7- ರಾಸಾಯನಿಕ ವಸ್ತುಗಳನ್ನು ಪೂರೈಕೆ ಮಾಡಲು ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆ ಇಟ್ಟು ಬಂಧನದ ಭೀತಿ ಎದುರಿಸುತ್ತಿದ್ದ ಆಡಳಿತಾರೂಢ ಬಿಜೆಪಿ ಪಕ್ಷದ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯದ ಈ ತೀರ್ಪಿನಿಂದಾಗಿಮಾಡಾಳ್ ವಿರೂಪಾಕ್ಷಪ್ಪ ಸದ್ಯಕ್ಕೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.ಲೋಕಾಯುಕ್ತ ಪೊಲೀಸರು ಬಂಧಿಸಬಹುದು ಎಂಬ ಹಿನ್ನಲೆಯಲ್ಲಿ ವಿರೂಪಾಕ್ಷಪ್ಪ ಹೈಕೋರ್ಟ್ ಏಕಸದಸ್ಯ ಪೀಠದ ಮುಂದೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಏಕಸದಸ್ಯ ಪೀಠದ ನ್ಯಾಯಾೀಧಿಶ ಕೆ.ನಟರಾಜನ್, ಮಾಡಾಳ್ ಅವರಿಗೆ 5 ಲಕ್ಷ ಭದ್ರತಾ […]