ಧಾರವಾಡದಲ್ಲಿ ಡ್ರೋಣ್ ಪ್ರಯೋಗಾಲಯ ಸ್ಥಾಪನೆ

ಬೆಂಗಳೂರು,ಜು.26- ಐಐಟಿ ಧಾರವಾಡದ ಕ್ಯಾಂಪಸ್‍ನಲ್ಲಿ ಅತ್ಯಾಧುನಿಕ ಡ್ರೋಣ್ ಪ್ರಯೋಗಾಲಯ ಸ್ಥಾಪಿಸುವ ಯೋಜನೆ ರೂಪಿಸುತ್ತಿದೆ. ಮಾನವರಹಿತ ವೈಮಾನಿಕ ವಾಹನ ತಂತ್ರಜ್ಞಾನ ಅಭಿವೃದ್ಧಿ ಅಧ್ಯಯನಕ್ಕಾಗಿ ಈ ಪ್ರಯೋಗಾಲಯ ಕಾರ್ಯ ನಿರ್ವಹಿಸಲಿದೆ. ಕೆಪಿಟಿಸಿಎಲ್ ಸಂಸ್ಥೆಗೆ ಅನುದಾನ ನೀಡಿದ್ದು, ಐಐಟಿ ಕ್ಯಾಂಪಸ್ ನಲ್ಲಿ ಪ್ರಯೋಗಾಲಯ ಸ್ಥಾಪನೆಗೆ ಈ ಅನುದಾನ ಬಳಕೆಯಾಗುತ್ತಿದೆ. ಡ್ರೋಣ್ ತಂತ್ರಜ್ಞಾನ ಅಧ್ಯಯನಕ್ಕೆ ಹಾಗೂ ಅದನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವುದಕ್ಕೆ ಈ ಪ್ರಯೋಗಾಲಯ ಸಹಕಾರಿಯಾಗಲಿದೆ. ಡ್ರೋಣ್ ತಂತ್ರಜ್ಞಾನವನ್ನು ಕೃಷಿ ಚಟುವಟಿಕೆಗಳಿಗೆ, ಸರಕುಗಳನ್ನು ಮನೆ ಬಾಗಿಲಿಗೆ ತಲುಪಿಸುವುದಕ್ಕಾಗಿಯೂ ಬಳಕೆ ಮಾಡಬಹುದಾಗಿದ್ದು, ಡ್ರೋನ್ ನ್ನು […]