ರೈತರ ಮನೆ ಬಾಗಿಲಿಗೆ ಭೂ ದಾಖಲೆ ತಲುಪಿಸಲು ಸಿದ್ಧತೆ

ಬೆಂಗಳೂರು, ಜ.8- ಗಣರಾಜ್ಯೋತ್ಸವ ದಿನದಂದು ರೈತರ ಮನೆ ಬಾಗಿಲಿಗೆ ಪಹಣಿ, ಅಟ್ಲಾಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ಉಚಿತವಾಗಿ ತಲುಪಿಸಲು ಕಂದಾಯ ಇಲಾಖೆ ಸಿದ್ಧತೆ ನಡೆಸಿದೆ.ಕಂದಾಯ ದಾಖಲೆ ಮನೆ ಬಾಗಿಲಿಗೆ ಎಂಬ ಯೋಜನೆಯನ್ನು ಹಮ್ಮಿಕೊಂಡಿದ್ದು, ಜ.26ರಂದು ರಾಜ್ಯಾದ್ಯಂತ ಅನುಷ್ಠಾನಗೊಳಿಸಲು ಸರ್ಕಾರ ಉದ್ದೇಶಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯಮಟ್ಟದಲ್ಲಿ ಈ ಯೋಜನೆಗೆ ಚಾಲನೆ ನೀಡಲಿದ್ದು, ಜಿಲ್ಲಾಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ತಾಲ್ಲೂಕು ಮಟ್ಟದಲ್ಲಿ ಸ್ಥಳೀಯ ಶಾಸಕರು ಚಾಲನೆ ನೀಡಲಿದ್ದಾರೆ. ರೈತರ ಹಕ್ಕನ್ನು ನಿರ್ಧರಿಸುವ ಮೂಲ […]