ಶಾರ್ಜಾದಿಂದ ಬರುತ್ತಿದ್ದ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಕೊಚ್ಚಿ.ಜ.30-ಶಾರ್ಜಾದಿಂದ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹೈಡ್ರಾಲಿಕ್ ವೈಫಲ್ಯದಿಂದ ತಾಂತ್ರಿಕ ಸಮಸ್ಯೆ ಕಂಡು ಬಂದ ಹಿನ್ನೆಲೆಯಲ್ಲಿ ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ರಾತ್ರಿ ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು. ಆತಂಕದ ನಡುವೆ ವಿಮಾನವು ರಾತ್ರಿ 8:26ಕ್ಕೆ ಸುರಕ್ಷಿತವಾಗಿ ಇಳಿದಿದೆ ಶಾರ್ಜಾದಿಂದ ಕೊಚ್ಚಿಗೆ ಬರುತ್ತಿದ್ದ ಏರ್ ಇಂಡಿಯ-412 ವಿಮಾನದ ಪೈಲಟ್ ಚಕ್ರದ ಹೈಡ್ರಾಲಿಕ್ ವೈಫಲ್ಯಕಂಡುಬಂದ ಹಿನ್ನಲೆಯಲ್ಲಿ ವಿಮಾನ ನಿಲ್ದಾಣ ನಿಯಂತ್ರಣ (ಎಟಿಸಿ ) ಗಮನಕ್ಕೆ ತಂದರು. ಕೂಡಲೆ ರಾತ್ರಿ 8:04ಕ್ಕೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತುಸ್ಥಿತಿ ಘೋಷಿಸಲಾಯಿತು. […]

ರಷ್ಯಾದಿಂದ ಗೋವಾಕ್ಕೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

ಪಣಜಿ,ಜ.10-ರಷ್ಯಾದ ಮಾಸ್ಕೋದಿಂದ ಭಾರತ ಗೋವಾಕ್ಕೆ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ದೂರವಾಣಿ ಕರೆ ಹಿನ್ನಲೆಯಲ್ಲಿ ಕೆಲ ಕಾಲ ಅಧಿಕಾರಿಗಳು ಆತಂಕಗೊಂಡ ಘಟನೆ ಕಳೆದ ರಾತ್ರಿ ನಡೆದಿದೆ. ಗೋವಾ ಎಟಿಸಿಗೆ ದೂರವಾಣಿ ಕರೆ ಮಾಡಿ ದುಷ್ಕರ್ಮಿ ಬಾಂಬ್ ಬೆದರಿಕೆ ಹಾಕಿದ್ದ ನಂತರ ವಿಮಾನದ ಮಾರ್ಗ ಬದಲಾವಣೆ ಮಾಡಿ ಜಾಮ್‍ನಗರದಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲಾಗಿದೆ. ಲ್ಯಾಂಡಿಂಗ್ ನಂತರ, ಎಲ್ಲಾ 236 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಇಳಿಸಿದ ಪೊಲೀಸರು, ಬಿಡಿಡಿಎಸ್ ಮತ್ತು ಸ್ಥಳೀಯ ಅಕಾರಿಗಳು ಇಡೀ ವಿಮಾನವನ್ನು ಶೋಧಿಸುತ್ತಿದ್ದಾರೆ […]

ಹೈದರಾಬಾದ್‍ಗೆ ಬರುತ್ತಿದ್ದ ಇಂಡಿಗೋ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ

ನವದೆಹಲಿ, ಜು.17- ಹೈದರಾಬಾದ್‍ಗೆ ಬರುತ್ತಿದ್ದ ಇಂಡಿಗೋ ವಿಮಾನ ತುರ್ತಾಗಿ ಪಾಕಿಸ್ತಾನದ ಕರಾಚಿಯಲ್ಲಿ ಇಳಿದಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಅರಬ್ ಎಮಿರೇಟ್ಸ್ ಶಾಜರ್ ದಿಂದ ಇಂದು ಬೆಳಿಗ್ಗೆ ಪಯಣ ಆರಂಭಿಸಿದ ಇಂಡಿಗೋ 6ಇ1406 ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾರ್ಗಮಧ್ಯೆ ಕರಾಚಿ ವಿಮಾನ ನಿಲ್ದಾಣದಲ್ಲಿ ಇಳಿದಿದೆ. ಎರಡನೇ ಇಂಜಿನ್‍ನಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ ವಿಮಾನ ತುರ್ತು ಭೂ ಸ್ಪರ್ಶ ಮಾಡಬೇಕಾಯಿತು ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. ವಿಮಾನದಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ರೀತಿಯ ಹಾನಿಯಾಗಿಲ್ಲ ಮತ್ತು ಮತ್ತೊಂದು […]