ಮಳೆ ಆರ್ಭಟಕ್ಕೆ ಕೊಡಗಿನ ಅಯ್ಯಪ್ಪ ಬೆಟ್ಟ ಬಿರುಕು, ನೂರಾರು ಜನರ ಸ್ಥಳಾಂತರ

ಬೆಂಗಳೂರು,ಜು.16- ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಭೂ ಕುಸಿತ ಉಂಟಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ನದಿಗಳು ಉಕ್ಕಿ ಹರಿದು, ಜಲಾಶಯಗಳು ಭರ್ತಿಯಾಗಿ ಒಳಹರಿವು ಹೆಚ್ಚಾಗಿ ನದಿಪಾತ್ರದ ಜನರನ್ನು ಸ್ಥಳಾಂತರ ಮಾಡಲಾಗಿದೆ.ಹಾಸನದಿಂದ ಸಕಲೇಶಪುರ ಮಾರ್ಗದಲ್ಲಿ ದೋಣಿಗಲ್ ಸಮೀಪ ಭೂ ಕುಸಿತ ಉಂಟಾಗಿ ಶಿರಾಡಿ ಘಾಟ್ ಸಂಪರ್ಕ ಬಂದ್ ಮಾಡಲಾಗಿದೆ. ಕಳೆದ 10 ದಿನಗಳಿಂದ ಮಲೆನಾಡು ಭಾಗದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ನದಿ, ತೊರೆ, […]

ಜುಲೈನಲ್ಲಿ ವಾಡಿಕೆಗಿಂತ ಶೇ.106 ರಷ್ಟು ಅಧಿಕ ಮಳೆ

ಬೆಂಗಳೂರು, ಜು.15- ರಾಜ್ಯದಲ್ಲಿ ಮುಂಗಾರು ಚೇತರಿಕೆಯಾಗಿದ್ದು, ಕಳೆದ ಎರಡು ವಾರದಲ್ಲಿ ವಾಡಿಕೆಗಿಂತ ಶೇ.106ರಷ್ಟು ಮಳೆಯಾಗಿದೆ. ಜುಲೈ 1ರಿಂದ ಜುಲೈ 14ರ ನಡುವಿನ ಅವಧಿಯಲ್ಲಿ ರಾಜ್ಯದ ವಾಡಿಕೆ ಮಳೆ ಪ್ರಮಾಣ 118ಮಿ.ಮೀ. ಆಗಿದ್ದು, 243ಮಿ.ಮೀ.ನಷ್ಟು ಮಳೆಯಾಗಿದ್ದು, ಒಟ್ಟಾರೆ ಶೇ.106ರಷ್ಟು ಹೆಚ್ಚು ಮಳೆಯಾದಂತಾಗಿದೆ. ಜೂನ್ ಮೊದಲ ಮೂರು ವಾರ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಭಾಗಗಳು ಮಳೆ ಕೊರತೆ ಎದುರಿಸುತ್ತಿದ್ದವು. ಜೂನ್ ಕೊನೆ ವಾರದಿಂದ ಚೇತರಿಕೆ ಕಂಡ ಮುಂಗಾರು ಇನ್ನೂ ತಗ್ಗಿಲ್ಲ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯ […]

ಆಗುಂಬೆ ಘಾಟ್‍ನಲ್ಲಿ ಭೂ ಕುಸಿತದ ಪರಿಶೀಲಿಸಿದ ಕಿಮ್ಮನೆ

ಶೃಂಗೇರಿ, ಜು.13- ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಅವರು ಆಗುಂಬೆ ಘಾಟ್‍ನ ಧರೆ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್‍ಗಳಿಂದ ಮಾಹಿತಿ ಪಡೆದರು. ಭೂ ಕುಸಿದ ಪ್ರದೇಶದ ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು, ತಮ್ಮ ಅವಯಲ್ಲಿಯೇ ರಾಜ್ಯ ಹೆದ್ದಾರಿಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತನೆ ಮಾಡಿದ್ದಾಗಿ ತಿಳಿಸಿದರು. ಇದೇ ವೇಳೆ ಈ ಪ್ರದೇಶದಲ್ಲಿ ಭೂ ಕುಸಿತ ದಿಂದಾಗಿ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ […]