ಬೃಹತ್, ಮಧ್ಯಮ ಕೈಗಾರಿಕೆಗಳ ನೆರವಿಗೆ ಸರ್ಕಾರ ಬದ್ಧ : ನಿರಾಣಿ
ಬೆಂಗಳೂರು, ಸೆ.20-ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ 15 ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ವಿವಿಧ ಕಾರಣಗಳಿಗೆ ಮುಚ್ಚಲ್ಪಟ್ಟಿವೆ. ಇದರಿಂದ 2086 ಮಂದಿ ನಿರುದ್ಯೋಗಿಗಳಾಗಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ವಿಧಾನ ಪರಿಷತ್ ನ ಪ್ರಶ್ನೋತ್ತರದ ವೇಳೆಯಲ್ಲಿ ಟಿ.ಎ.ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೈಗಾರಿಕೆಗಳು ಕಚ್ಚಾ ಮಾಲಿನ ಕೊರತೆ, ಹಣಕಾಸಿನ ತೊಂದರೆ, ಕಾರ್ಮಿಕರ ಸಮಸ್ಯೆಗಳನ್ನು ಎದರಿಸುತ್ತಿದ್ದರೆ, ಅಂತಹ ಕೈಗಾರಿಕೆಗಳು ಬಯಸಿದ್ದಲ್ಲಿ ಸರ್ಕಾರ ನೆರವು ನೀಡಲು ಸಿದ್ಧವಿದೆ ಎಂದು ಹೇಳಿದರು. ಇದನ್ನೂ […]