ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಹುಲ್ ಗಾಂಧಿ ಆಪ್ತನ ವಿಚಾರಣೆ

ನವದೆಹಲಿ, ಫೆ.4- ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಪ್ತ ಅಲಂಕಾರ್ ಸಾವಾಯಿಯನ್ನು ವಿಚಾರಣೆಗೆ ಒಳಪಡಿಸಿದ್ದು, ಪಕ್ಷದ ಸಾಮಾಜಿಕ ಜಾಲತಾಣ ನಿರ್ವಹಣೆ ಮತ್ತು ಇತರ ಸೇವೆಗಳಿಗೆ ಹಣ ಬಳಕೆಯಾಗಿರುವ ಕುರಿತು ತನಿಖೆ ಆರಂಭಗೊಂಡಿದೆ. ಕ್ರೌಡ್ ಫಂಡಿಂಗ್ ಹಗರಣದಲ್ಲಿ ಗುಜರಾತ್ ಪೊಲೀಸರು ತೃಣಮೂಲ ಕಾಂಗ್ರಸ್ ವಕ್ತಾರ ಸಾಕೆತ್ ಗೋಕುಲೆಯನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದಾಗ ಅಕ್ರಮ ಹಣ ವಹಿವಾಟಿನ ಮಾಹಿತಿ ಬೆಳಕಿಗೆ ಬಂದಿದೆ. ಸಹಜವಾಗಿ ಪ್ರಕರಣದ ಜಾರಿ ನಿರ್ದೇಶನಾಲಯ ವಿಚಾರಣೆಗೆ ಪ್ರೇರೆಪಿಸಿದೆ. […]