ಕನ್ನಡದ ಮಕ್ಕಳಿಗೆ ಅನ್ಯಾಯವಾದರೆ ರಾಷ್ಟ್ರೀಯ ಕಾನೂನು ಶಾಲೆ ವಿರುದ್ಧ ಕ್ರಮ

ಬೆಂಗಳೂರು, ಫೆ. 21- ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕಾನೂನು ಶಾಲೆಯಲ್ಲಿ (ನ್ಯಾಷನಲ್ ಲಾ ಸ್ಕೂಲ್) ಕನ್ನಡಿಗರಿಗೆ ಶೇ. 25ರಷ್ಟು ಮೀಸಲಾತಿ ಕಾನೂನುಬದ್ಧವಾಗಿ ನೀಡದಿದ್ದರೆ, ಸರ್ಕಾರ ಸೂಕ್ತ ಕ್ರಮಕೈಗೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಸುರೇಶಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದ ನಿಲುವು ಈ ಬಗ್ಗೆ ಸ್ಪಷ್ಟವಾಗಿದ್ದು, ನಮ್ಮ ಮಕ್ಕಳಿಗೆ ಮೀಸಲಾತಿ ಸಿಗಬೇಕು ಎಂಬುದಕ್ಕೆ ಬದ್ಧವಾಗಿದ್ದೇವೆ. ಫೆ.24ರಂದು ಈ ಸಂಬಂಧದ ಅರ್ಜಿ ವಿಚಾರಣೆಗೆ ಬರಲಿದೆ. ನಮಗೆ ನ್ಯಾಯ […]