ರಾಜ್ಯಕ್ಕೆ ಲಗ್ಗೆಯಿಡಲಿದ್ದಾರೆ ಬಿಜೆಪಿ ಘಟಾನುಘಟಿ ನಾಯಕರು

ಬೆಂಗಳೂರು,ಡಿ.7- ಗುಜರಾತ್ ಮತ್ತು ಹಿಮಾಚಲಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶವನ್ನು ಎದುರು ನೋಡುತ್ತಿರುವ ರಾಜ್ಯ ಬಿಜೆಪಿ ನಾಯಕರು ಪ್ರದೇಶವಾರಿನಂತೆ ಘಟಾನುಘಟಿ ನಾಯಕರನ್ನು ಕರ್ನಾಟಕಕ್ಕೆ ಆಹ್ವಾನಿಸಲು ಮುಂದಾಗಿದ್ದಾರೆ. ಅಭಿವೃದ್ಧಿ ಮತ್ತು ಹಿಂದುತ್ವವನ್ನು ಅಸ್ತ್ರ ಮಾಡಿಕೊಂಡಿರುವ ಬಿಜೆಪಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ವಿಭಿನ್ನವಾದ ಪ್ರಚಾರ ತಂತ್ರವನ್ನು ಹೆಣೆದಿದೆ. ಪ್ರಧಾನಿ ನರೇಂದ್ರಮೋದಿ ಅವರಿಂದ ಅಭಿವೃದ್ಧಿ ಅಜೆಂಡಾ ಪ್ರಸ್ತಾಪವಾದರೆ ಹಿಂದೂ ಫೈರ್ ಬ್ರಾಂಡ್ ಎಂದೇ ಗುರುತಿಸಿಕೊಂಡಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಹಿಂದೂತ್ವ ಅಸ್ತ್ರವನ್ನು ಬಳಸಲಿ ದ್ದಾರೆ. ಯಾವ ನಾಯಕರು ಎಲ್ಲಿ, ಯಾವ […]

ರಾಷ್ಟ್ರೀಯ ನಾಯಕರನ್ನು ಕರೆತಂದು ಸಾಲು ಸಾಲು ಸಮಾವೇಶ ನಡೆಸಲು ಬಿಜೆಪಿ ಸಿದ್ಧತೆ

ಬೆಂಗಳೂರು,ನ.18- ಬರಲಿರುವ ವಿಧಾನಸಭೆ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಬಿಜೆಪಿ , ಸಾಲು ಸಾಲು ಸಮಾವೇಶಗಳನ್ನು ನಡೆಸಿ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಲು ಮುಂದಾಗಿದೆ. ಭಾನುವಾರ ಬಳ್ಳಾರಿಯಲ್ಲಿ ನಡೆಯಲಿರುವ ಎಸ್ಸಿ ಮೋರ್ಚಾದ ನವಶಕ್ತಿ ಸಮಾವೇಶಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರು ಸೇರಿದಂತೆ ಮತ್ತಿತರರು ಆಗಮಿಸಲಿದ್ದಾರೆ. ಡಿಸೆಂಬರ್‍ನಲ್ಲಿ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪ ಬಳಿ ರಾಷ್ಟ್ರೀಯ ಲಂಬಾಣಿ ಸಮಾವೇಶ ನಡೆಯಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮಿಸುವ ನಿರೀಕ್ಷೆ ಇದೆ. ಗುಜರಾತ್ ಮತ್ತು ಹಿಮಾಚಲಪ್ರದೇಶದ ವಿಧಾನಸಭೆ […]