ಮೀಸಲಾತಿ ಹೆಚ್ಚಳಕ್ಕಾಗಿ ಒಕ್ಕಲಿಗರ ಹೋರಾಟ

ಬೆಂಗಳೂರು,ನ.27- ಒಕ್ಕಲಿಗರ ಮೀಸಲಾತಿ ಪ್ರಮಾಣವನ್ನು ಶೇ.12ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ಮನವಿ ಮಾಡುವುದು, ನಿಗದಿತ ಗಡುವಿನೊಳಗೆ ಮೀಸಲಾತಿ ಹೆಚ್ಚಳ ಮಾಡಿ ಆದೇಶ ಹೊರಡಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡಲು ಇಂದು ನಡೆದ ಒಕ್ಕಲಿಗ ಸಮುದಾಯದ ಪ್ರಮುಖರ ಸಭೆಯಲ್ಲಿ ತೀರ್ಮಾನಿಸಲಾಯಿತು. ರಾಜ್ಯ ಒಕ್ಕಲಿಗರ ಸಂಘದ ನೇತೃತ್ವದಲ್ಲಿಂದು ಕುವೆಂಪು ಕಲಾಕ್ಷೇತ್ರದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ , ಪಟ್ನಾಯಕನಹಳ್ಳಿ ಮಠದ ಶ್ರೀ ನಂಜಾವಧೂತ ಮಹಾಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಮಠದ ಶ್ರೀಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ಜರುಗಿದ ಒಕ್ಕಲಿಗ […]

ಒಕ್ಕಲಿಗರ ಮೀಸಲಾತಿ ಹೆಚ್ಚಳಕ್ಕಾಗಿ ಪಕ್ಷಾತೀತ ಹೋರಾಟಕ್ಕೆ ಸಜ್ಜು

ಬೆಂಗಳೂರು, ನ.26- ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವಂತೆ ರಾಜ್ಯ ಸರ್ಕಾರನ್ನು ಆಗ್ರಹಿಸಿ ಪಕ್ಷಾತೀತ ಹೋರಾಟ ನಡೆಸಲು ಒಕ್ಕಲಿಗ ಸಮು ದಾಯ ಸಜ್ಜಾಗಿದ್ದು, ಹೋರಾಟದ ರೂಪುರೇಷೆ ಬಗ್ಗೆ ನಾಳೆ ಮಹತ್ವದ ಸಭೆ ನಡೆಯಲಿದೆ. ರಾಜ್ಯ ಒಕ್ಕಲಿಗರ ಸಂಘದ ಆವರಣದಲ್ಲಿರುವ ಕುವೆಂಪು ಕಲಾಕ್ಷೇತ್ರದಲ್ಲಿ ಬೆಳಿಗ್ಗೆ 10.30 ಗಂಟೆಗೆ ಒಕ್ಕಲಿಗರ ಮೀಸಲಾತಿ ಹೆಚ್ಚಿಸುವ ಹೋರಾಟದ ಕುರಿತ ಒಕ್ಕಲಿಗ ಸಮುದಾಯದ ಪ್ರಮುಖರ ಸಭೆಯನ್ನು ಕರೆಯಲಾಗಿದೆ. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಪಟ್ಟನಾಯಕನಹಳ್ಳಿ ಮಠದ ಶ್ರೀ ನಂಜಾವಧೂತ ಮಹಾಸ್ವಾಮೀಜಿ ಮತ್ತು […]

ಕಾಂಗ್ರೆಸ್‍ನ ಪ್ರಭಾವಿ ನಾಯಕರ ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿದ ಬಿಜೆಪಿ

ಬೆಂಗಳೂರು,ನ.15- ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿರುವ ಕಾಂಗ್ರೆಸ್‍ನ 15 ಪ್ರಭಾವಿ ನಾಯಕರು ಪ್ರತಿನಿಧಿಸುತ್ತಿರುವ ಕ್ಷೇತ್ರಗಳನ್ನು ಬಿಜೆಪಿ ಟಾರ್ಗೆಟ್ ಮಾಡಿದೆ. ಈ ಕ್ಷೇತ್ರಗಳಿಗೆ ಸಮಬಲ ಸ್ಪರ್ಧೆ ನೀಡುವ ಅಭ್ಯರ್ಥಿಗಳು ಸಂಪನ್ಮೂಲ, ಚುನಾವಣಾ ತಂತ್ರ, ಪ್ರಧಾನಿ ನರೇಂದ್ರ ಮೋದಿಯವರಿಂದ ಪ್ರಚಾರ ನಡೆಸುವ ಮೂಲಕ ಕ್ಷೇತ್ರದಲ್ಲೇ ಕಟ್ಟಿ ಹಾಕುವ ರಣತಂತ್ರವನ್ನು ಬಿಜೆಪಿ ಹೆಣೆದಿದೆ. ಈ ಕ್ಷೇತ್ರಗಳಲ್ಲಿ ಖುದ್ದು ಪ್ರಧಾನಿ ನರೇಂದ್ರಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹಸಚಿವ ಅಮಿತ್ ಷಾ, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ […]

ಶೇ.10ರಷ್ಟು ಮೀಸಲಾತಿ : ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಕಾರ್ಯಕ್ಕೆ ಸಂದ ಜಯ

ನವದೆಹಲಿ,ನ.7- ಇಡಬ್ಲ್ಯುಎಸ್ ವಿಷಯದಲ್ಲಿ ಸುಪ್ರೀಂಕೋರ್ಟ್ ತೀರ್ಪು ಪ್ರಧಾನಿ ನರೇಂದ್ರಮೋದಿಯವರ ಸಾಮಾಜಿಕ ನ್ಯಾಯದ ಕಾರ್ಯ ಯೋಜನೆಗೆ ದೊರೆತ ಜಯ ಎಂದು ಬಿಜೆಪಿ ವ್ಯಾಖ್ಯಾನಿಸಿದೆ. ಬಿಜೆಪಿಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಪ್ರತಿಕ್ರಿಯಿಸಿದ್ದು, ಮೀಸಲಾತಿ ಹೊರತಾದ ವರ್ಗಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10ರಷ್ಟು ಮೀಸಲಾತಿ ನೀಡುವ ಪ್ರಧಾನಿ ನರೇಂದ್ರಮೋದಿ ಸರ್ಕಾರದ ತೀರ್ಮಾನಕ್ಕೆ ಕಾನೂನಿನ ಬೆಂಬಲ ದೊರೆತಿದೆ ಎಂದಿದ್ದಾರೆ. ಸಾಮಾಜಿಕ ನ್ಯಾಯದಾನದಲ್ಲಿ ಇದು ಹೊಸ ದಿಕ್ಕನ್ನು ಆರಂಭಿಸುತ್ತಿದೆ. ಪ್ರಧಾನಿಯವರ ಗರೀಬ್ ಕಲ್ಯಾಣ್‍ಗೆ ಹೊಸ ಸೇರ್ಪಡೆ ಎಂದು ಹೇಳಿದ್ದಾರೆ. ಬಿಜೆಪಿಯ ಪ್ರಧಾನ ಕಾರ್ಯದರ್ಶಿ […]

ಮಾಜಿ ಸಿಎಂ ಸೇರಿ ಮಹಾರಾಷ್ಟ್ರ ರಾಜಕೀಯ ಮುಖಂಡರ Z+ ಭದ್ರತೆ ಕಡಿತ

ಮುಂಬೈ, ಅ.29- ಮಹಾರಾಷ್ಟ್ರದಲ್ಲಿ ಕೆಲವು ರಾಜಕೀಯ ಪಕ್ಷಗಳ ಮುಖಂಡರುಗಳಿಗೆ ನೀಡಲಾಗಿದ್ದ ಪೊಲೀಸ್ ಭದ್ರತೆಯನ್ನು ಕಡಿತಗೊಳಿಸಲಾಗಿದೆ. ಅದರಲ್ಲೂ ಕಾಂಗ್ರೆಸ್, ಎನ್‍ಸಿಪಿ ಹಾಗೂ ಉದ್ದವ್ ಠಾಕ್ರೆ ಬಣದ ಹಲವಾರು ಹಿರಿಯ ನಾಯಕರುಗಳಿಗೆ ನೀಡಲಾಗಿದ್ದ ಭದ್ರತೆಯನ್ನು ಶಿಂಧೆ ಸರ್ಕಾರ ಕಡಿತಗೊಳಿಸಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಪಕ್ಷ ಮತ್ತು ಉದ್ಧವ್ ಠಾಕ್ರೆ ಬಣದ ಹಲವು ಹಿರಿಯ ನಾಯಕರ ಭದ್ರತೆಗೆ ನಿಯೋಜಿಸಲಾಗಿದ್ದ ಭದ್ರತಾ ಸಿಬ್ಬಂದಿಯನ್ನು ಶಿಂಧೆ-ಫಡ್ನವೀಸ್ ಸರ್ಕಾರ ತೆಗೆದುಹಾಕಿದೆ. ಎನ್‍ಸಿಪಿ ನಾಯಕರಾದ ಅಜಿತ್ ಪವಾರ್ ಮತ್ತು ದಿಲೀಪ್ ವಾಲ್ಸೆ ಪಾಟೀಲ್ ಅವರ ಭದ್ರತೆಯನ್ನು […]

ಶವದ ಮೇಲೆ ರಾಜಕೀಯ ಮಾಡುವ ಬಿಜೆಪಿ ಕ್ಷಮೆ ಕೇಳಲಿ : ಪ್ರಿಯಾಂಕ್ ಖರ್ಗೆ

ಬೆಂಗಳೂರು,ಅ.18- ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದ್ದ ಪರೇಶ್ ಮೆಹ್ತಾ ಸಾವಿನ ಪ್ರಕರಣದಲ್ಲಿ ಸುಳ್ಳು ಮಾಹಿತಿಗಳನ್ನು ನೀಡಿ, ಕೋಮು ಗಲಭೆಗೆ ಕಾರಣವಾದ ಬಿಜೆಪಿ ನಾಯಕರ ವಿರುದ್ಧ 15 ದಿನಗಳಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳದೇ ಇದ್ದರೆ ಕಾಂಗ್ರೆಸ್ ಪಕ್ಷ ಸಿಬಿಐಗೆ ದೂರು ನೀಡಲಿದೆ ಎಂದು ಕೆಪಿಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಎಚ್ಚರಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2017ರ ಡಿಸೆಂಬರ್‍ನಲ್ಲಿ 18 ವರ್ಷದ ಯುವಕ ಪರೇಶ್ ಮೆಹ್ತಾ ಸಾವು ಸಂಭವಿಸಿತ್ತು. ಡಿ. […]

ಕಳಂಕಿತ ಕೋಡಿಹಳ್ಳಿ ಹೊರ ಹಾಕಿ : ತೀವ್ರ ವಾಗ್ವಾದ

ಬೆಂಗಳೂರು, ಅ.15- ಭ್ರಷ್ಟಾಚಾರದ ಆರೋಪ ಹೊತ್ತಿರುವ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಸಭೆಗೆ ಆಹ್ವಾನಿಸಿದ್ದಕ್ಕೆ ರೈತ ಮುಖಂಡರು ಸಚಿವರ ಎದುರೇ ಸಭೆಯಿಂದ ಹೊರ ಹಾಕಲು ತೀವ್ರ ವಾಗ್ವಾದ ನಡೆಯಿತು. ಕಬ್ಬು ಬೆಲೆ ನಿಗದಿ ಹಾಗೂ ಬೆಳೆಗಾರರ ಸಮಸ್ಯೆಗಳನ್ನು ಚರ್ಚಿಸಲು ವಿಧಾನಸೌಧದಲ್ಲಿ ಸಕ್ಕರೆ ಖಾತೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ರೈತ ಮುಖಂಡರ ಜೊತೆ ಸಭೆ ಕರೆದಿದ್ದರು. ಸಭೆಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಆಹ್ವಾನ ನೀಡಿರಲಿಲ್ಲ. ಆದರೆ ಅವರಾಗಿಯೇ ಸಭೆಯಲ್ಲಿ ಆಸೀನರಾಗಿದ್ದು ಕೆಲವು ರೈತರ ಮುಖಂಡರು […]

ರಾಷ್ಟ್ರೀಯ ಪಕ್ಷಗಳ ಪ್ರಮುಖ ಹುದ್ದೆಗಳಲ್ಲಿ ರಾರಾಜಿಸುತ್ತಿರುವ ಕನ್ನಡಿಗರು

ದಕ್ಷಿಣ ಭಾರತೀಯರನ್ನು ಮದ್ರಾಸಿ ಎಂದು ಕರೆಯುವ ಮೂಲಕ ಕಾಲೆಳೆಯುವ ಪ್ರಯತ್ನ ನಡೆಯುತ್ತಲೇ ಇದೆ. ಈ ನಡುವೆ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಹುದ್ದೆಗಳನ್ನು ಕನ್ನಡಿಗರು ಅಲಂಕರಿಸಿ ತಮ್ಮ ಪ್ರೌಢಿಮೆ ಮೆರೆದಿರುವುದು ಇದೆ.ಈಗ ಐತಿಹಾಸಿಕ ಹಿನ್ನೆಲೆಯುಳ್ಳ ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷರು ಚುನಾಯಿತರಾಗುವ ಸನ್ನಿಹದಲ್ಲಿ ಮತ್ತೊಂದು ಮೈಲಿಗಲ್ಲು ಸೃಷ್ಟಿಯಾಗುತ್ತಿದೆ. ಚಲನಚಿತ್ರ ರಂಗದಲ್ಲಿ ಪ್ಯಾನ್ ಇಂಡಿಯಾ ದಾಟಿ, ಜಾಗತಿಕವಾಗಿ ಸದ್ದು ಮಾಡಿದ ಸಿನಿಮಾಗಳನ್ನು ನಿರ್ಮಿಸಿ, ನಿರ್ದೇಶಿಸಿ ಹಾಟ್ ಹಿಂದಿ ಪ್ರದೇಶವನ್ನು ಕಣ್ಣರಳಿಸುವಂತೆ ಮಾಡಿದ ದಕ್ಷಿಣ ಭಾರತೀಯರು, ಈಗ ರಾಜಕಾರಣದಲ್ಲೂ ತಮ್ಮ ಛಾಪು ಮೂಡಿಸುತ್ತಿದ್ದಾರೆ. […]

PFI ನಿಷೇಧ : RSSನತ್ತ ಬೊಟ್ಟುಮಾಡಿದ ಕಾಂಗ್ರೆಸ್

ನವದೆಹಲಿ,ಸೆ.28- ಪಿಎಫ್‍ಐ ಮತ್ತು ಅದರ ನಿಷೇಧ ಕುರಿತು ಅಭಿಪ್ರಾಯ ವ್ಯಕ್ತಪಡಿಸಲು ಕರ್ನಾಟಕ ಕಾಂಗ್ರೆಸ್ ಹೊರತು ಪಡಿಸಿ ರಾಷ್ಟ್ರ ಮಟ್ಟದ ನಾಯಕರು ಹಿಂದೇಟು ಹಾಕಿರುವ ಬೆಳವಣಿಗೆ ಬಿಜೆಪಿ ಬಾಯಿಗೆ ಆಹಾರ ಒದಗಿಸಿದೆ. ದೆಹಲಿಯಲ್ಲಿ ನಿನ್ನೆ ಪ್ರಧಾನಿ ಮಹತ್ವದ ಸಭೆ ನಡೆಸಿದ ಬಳಿಕ ಪಿಎಫ್‍ಐ ಮತ್ತು ಅದರ ಎಂಟು ಅಂಗ ಸಂಸ್ಥೆಗಳನ್ನು ನಿಷೇಧ ಮಾಡಲಾಗಿತ್ತು. ಇಂದು ಬೆಳಗ್ಗೆ ಇದು ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿಯ ನಾಯಕರು ನಾ ಮುಂದು, ತಾ ಮುಂದು ಎಂದು ಪ್ರತಿಕ್ರಿಯಿಸಿ ನಿಷೇಧವನ್ನು ಸ್ವಾಗತಿಸಿದ್ದಾರೆ. ಆದರೆ ಕಾಂಗ್ರೆಸ್ […]

ಸಂಪುಟ ವಿಸ್ತರಣೆ ಕಸರತ್ತು ಆರಂಭ, ಈ ವಾರ ಸಿಎಂ ಬೊಮ್ಮಾಯಿ ದೆಹಲಿ ಭೇಟಿ

ಬೆಂಗಳೂರು,ಸೆ.27- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ವಾರ ದೆಹಲಿಗೆ ಭೇಟಿ ನೀಡಿ ಸಂಪುಟ ವಿಸ್ತರಣೆ ಕುರಿತು ಬಿಜೆಪಿಯ ವರಿಷ್ಠರೊಂದಿಗೆ ಚರ್ಚಿಸುವ ಸಾಧ್ಯತೆ ಇದೆ. ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಈ ತಿಂಗಳ ಅಂತ್ಯದೊಳಗೆ ನಡೆಯುವ ಸಾಧ್ಯತೆ ಇರುವುದರಿಂದ ವರಿಷ್ಠರ ಅನುಮತಿ ಪಡೆಯಲು ದೆಹಲಿಗೆ ತೆರಳುವ ಸಂಭವವಿದೆ. ಒಂದು ಮೂಲದ ಪ್ರಕಾರ ಗುರುವಾರ ಇಲ್ಲವೇ ಶುಕ್ರವಾರವೇ ಸಚಿವ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗೆ ಮುಗಿದ ಅಧಿವೇಶನದ ಸಂದರ್ಭದಲ್ಲಿ ಬೊಮ್ಮಾಯಿ […]