ಬಿಎಸ್‍ವೈ-ಮೋದಿ ಗೌಪ್ಯ ಮಾತುಕತೆ, ರಾಜ್ಯ ಬಿಜೆಪಿಯಲ್ಲಿ ಸಂಚಲನ

ನವದೆಹಲಿ,ಜ.17- ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ನರೇಂದ್ರಮೋದಿ ಅವರು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ನಡೆಸಿರುವ ಗೌಪ್ಯ ಮಾತುಕತೆ ಸಂಚಲನ ಸೃಷ್ಟಿಸಿದೆ. ರಾಜ್ಯ ಬಿಜೆಪಿಯೊಳಗೆ ಯಡಿಯೂರಪ್ಪ ನವರ ಯುಗ ಮುಗಿಯಿತು ಎಂದು ಅವರ ವಿರೋಧಿಗಳು ಮಾತನಾಡಿಕೊಳ್ಳುತ್ತಿರುವ ಸಂದರ್ಭದಲ್ಲೇಮೋದಿ ಮತ್ತು ಬಿಎಸ್‍ವೈ ಅವರ ಭೇಟಿ ಅನೇಕ ಸಂಶಯಗಳನ್ನು ಹುಟ್ಟು ಹಾಕಿದೆ. ಮೇಲ್ನೋಟಕ್ಕೆ ಇದೊಂದು ಸೌಹಾರ್ದಯುತ ಭೇಟಿ ಎಂದು ಹೇಳಲಾಗಿದೆ. ಶಿವಮೊಗ್ಗದಲ್ಲಿ ಉದ್ಘಾಟನೆಗೆ ಸಿದ್ದಗೊಂಡಿರುವ ವಿಮಾನ ನಿಲ್ದಾಣ, ಇತರೆ ಯೋಜನೆಗಳ […]

ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ದಿವಾಳಿತನ

ಬೆಂಗಳೂರು,ಜ.3- ಬಿಜೆಪಿಯ ಕೊನೆಯ ದಿನಗಳಿವು, ಅವರ ದೀಪ ಹಾರಿ ಹೋಗುತ್ತಿದೆ, ಕಾಂಗ್ರೆಸ್ ದೀಪ ಹತ್ತಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಜನವರಿ 11ರ ಬಳಿಕ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದಾರೆ. ಪ್ರತಿಯೊಬ್ಬರನ್ನು ತಲುಪುತ್ತೇವೆ, ಬಿಜೆಪಿ ಏನೇಲ್ಲಾ ಅವಾಂತರಗಳನ್ನು ಸೃಷ್ಟಿಸಿದೆ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡುತ್ತೇವೆ. ನಂತರ ಬಿಜೆಪಿಯ ದೀಪ ಹಾರಿ ಹೋಗಲಿದೆ, ಕಾಂಗ್ರೆಸ್ ದೀಪ ಹೊತ್ತಿಕೊಳ್ಳಲಿದೆ ಎಂದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ರಾಜ್ಯಕ್ಕೆ ಭೇಟಿ […]

ಸಿಎಂ ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ಎದುರಿಸಲಿದೆ ಬಿಜೆಪಿ

ಬೆಂಗಳೂರು,ಅ.24- 2023ರ ವಿಧಾನಸಭೆ ಚುನಾವಣೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ನಡೆಯಲಿದೆ ಎಂದು ಬಿಜೆಪಿ ಹೈಕಮಾಂಡ್ ಸ್ಪಷ್ಟನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯನ್ನು ಹತ್ತು ವಿಭಾಗಗಳನ್ನಾಗಿ ಮಾಡಿ ಅದರಲ್ಲಿ ಪಕ್ಷವನ್ನು ಹುರಿದುಂಬಿಸುವ ಜವಾಬ್ದಾರಿಯನ್ನು ಹೊರರಾಜ್ಯದ ರಾಷ್ಟ್ರೀಯ ನಾಯಕರಿಗೆ ನೀಡಲು ಮುಂದಾಗಿದೆ. ರಾಜ್ಯದ ಬಗ್ಗೆ ಉತ್ತಮ ಅರಿವು ಹೊಂದಿರುವ ಈ ನಾಯಕರು ನವೆಂಬರ್‍ನಲ್ಲಿ ಭೇಟಿ ಆರಂಭಿಸಿ ಪಕ್ಷದ ಬಗ್ಗೆ ತಳ ಮಟ್ಟದ ಸಮೀಕ್ಷೆ ವರದಿಗಳನ್ನು ಸಂಗ್ರಹಿಸಲಿದ್ದಾರೆ ಹಾಗೂ ಟಿಕೆಟ್ ಆಕಾಂಕ್ಷಿಗಳೊಂದಿಗೆ ಸಂವಾದ ನಡೆಸುವ ನಿರೀಕ್ಷೆಯಿದೆ. ಕೇಂದ್ರ […]

ನಾಯಕತ್ವ ಬದಲಾವಣೆ ಇಲ್ಲ, ನಾನು ಯಾರ ಕೈಗೊಂಬೆಯೂ ಅಲ್ಲ : ಸಿಎಂ ಸ್ಪಷ್ಟನೆ

ಬೆಂಗಳೂರು,ಆ.27- ನಾಯಕತ್ವ ಬದಲಾವಣೆ ವದಂತಿಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕೇಂದ್ರ ಬಿಜೆಪಿ ವರಿಷ್ಠರು ನನಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದಾರೆ ಎಂದು ಹೇಳಿದ್ದಾರೆ. ತಮ್ಮನ್ನು ವಿಧಾನಸಭೆ ಚುನಾವಣೆಗೂ ಮುನ್ನವೇ ಬದಲಾಯಿಸಿ ಬೇರೊಬ್ಬರಿಗೆ ಸಾರಥ್ಯ ನೀಡಲಾಗುತ್ತದೆ ಎಂಬುದರಲ್ಲಿ ಯಾವುದೇ ಹುರುಳಿಲ್ಲ. ನನಗೆ ಕೇಂದ್ರ ಬಿಜೆಪಿ ನಾಯಕರ ಸಂಪೂರ್ಣ ಬೆಂಬಲವಿದೆ. ಆಡಳಿತ ಯಾರೊಬ್ಬರು ಹಸ್ತಕ್ಷೇಪ ಮಾಡುತ್ತಿಲ್ಲ ಎಂದು ತಿಳಿಸಿದರು. ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ನಾಯಕತ್ವ ಬದಲಾವಣೆಯಾಗುತ್ತದೆಎಂಬ ಪುಕಾರು ಕೇಳಿಬರುತ್ತದೆಯಲ್ಲ ಎಂಬುದಕ್ಕೆ ಪ್ರತಿಕ್ರಿಯಿಸಿದ […]

ಆ.15ರ ನಂತರ ರಾಜ್ಯ ಬಿಜೆಪಿಯಲ್ಲಿ ಭಾರೀ ಬದಲಾವಣೆ ಸಾಧ್ಯತೆ..?

ಬೆಂಗಳೂರು,ಆ.8- ರಾಜ್ಯ ರಾಜಕಾರಣದಲ್ಲಿ ಆ.15ರ ನಂತರ ಸ್ವಾತಂತ್ರ್ಯ ದಿನಾಚರಣೆ ಬಳಿಕ ಯಾರೂ ಕೂಡ ಊಹಿಸಲಾಗದ ಬದಲಾವಣೆಯಾಗಲಿದೆ ಎಂಬ ಮಾತುಗಳು ಆಡಳಿತರೂಢ ಬಿಜೆಪಿಯಲ್ಲಿ ಪ್ರಬಲವಾಗಿ ಕೇಳಿಬರುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಹಾಗೂ ಸಚಿವ ಸಂಪುಟ ವಿಸ್ತರಣೆ/ಪುನಾರಚನೆ ಕುರಿತಂತೆ ಮಹತ್ವದ ಬದಲಾವಣೆ ಮಾಡಲು ಕೇಂದ್ರ ಬಿಜೆಪಿ ವರಿಷ್ಠರು ತೀರ್ಮಾನಿಸಿದ್ದಾರೆ ಎನ್ನಲಾಗುತ್ತಿದೆ. ಬದಲಾವಣೆ ಎಂದರೆ ಕೇವಲ ಸಿಎಂ ಬೊಮ್ಮಾಯಿ ಅವರ ಕುರ್ಚಿಗೆ ಆಪತ್ತು ಎಂದು ಭಾವಿಸಬೇಕಾಗಿಲ್ಲ. ಇದು ಯಾರಿಗೆ ಬೇಕಾದರೂ ಅದೃಷ್ಟ ಕೈ ಕೊಟ್ಟು […]

ಮೋದಿ ಸಾರಥ್ಯದಲ್ಲೇ 2024ರ ಲೋಕಸಭಾ ಚುನಾವಣೆ : ಅಮಿತ್‍ಷಾ

ಪಾಟ್ನ, ಆ.1- ಮುಂದಿನ 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯನ್ನು ಪ್ರಧಾನಿ ನರೇಂದ್ರ ಮೋದಿಯವರ ಸಾರಥ್ಯದಲ್ಲೇ ಎದುರಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‍ಷಾ ಹೇಳಿದ್ದಾರೆ. ಎನ್‍ಡಿಯಲ್ಲಿರುವ ಮಿತ್ರ ಪಕ್ಷಗಳು ಹಾಗೂ ಬಿಹಾರದಲ್ಲಿ ನಮ್ಮ ಮಿತ್ರರಾಗಿರುವ ಜೆಡಿಯು ನಮ್ಮೊಂದಿಗೇ ಇರುತ್ತಾರೆ ಎಂದು ಇಲ್ಲಿ ನಡೆದ ಜಂಟಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಂತರ ಸುದ್ದಿಗಾರರೊಂದಿಗೆ ಅಮಿತ್ ಷಾತಿಳಿಸಿದ್ದಾರೆ. ಮೂರನೇ ಬಾರಿಗೂ ಮೋದಿ ಅವರು ಪ್ರಧಾನಿಯಾಗಿ ಮುಂದುವರೆಯಲಿದ್ದಾರೆ ಎಂದು ಹೇಳಿರುವ ಅವರು ಕಳೆದ ಭಾರಿಗಿಂತ ಹೆಚ್ಚಿನ ಸ್ಥಾನವನ್ನು ಗೆಲ್ಲಲು ಪಕ್ಷದ ಕಾರ್ಯಕರ್ತರು […]