ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್‍ಗೆ ಜೀವ ಬೆದರಿಕೆ

ಶಿವಮೊಗ್ಗ, ಮಾ.9-ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಸಂಬಂಧ ನೀಡಿದ್ದ ಹೇಳಿಕೆ ಹಿನ್ನೆಲೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್‍ಗೆ ಜೀವ ಬೆದರಿಕೆವೊಡ್ಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಈ ಹಿನ್ನಲೆಯಲ್ಲಿ ಫೆ.21ರಂದು ಅವರಿಗೆ ಬೆದರಿಕೆ ಕರೆ ಬಂದಿದೆ. ಮುಸ್ತಾಕ್ ಅಲಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶವನ್ನು ಪ್ರಕಟಿಸಿದ್ದಾನೆ ಎಂದು ಆರೋಪಿಸಲಾಗಿದೆ. […]