7 ಲಕ್ಷ ಹೆಕ್ಟೇರ್ ಅರಣ್ಯ ಪ್ರದೇಶ ಕಂದಾಯ ವ್ಯಾಪ್ತಿಗೆ

ಬೆಳಗಾವಿ,ಡಿ.29-ರಾಜ್ಯದಲ್ಲಿ 3,30186.93 ಹೆಕ್ಟರ್ ಪ್ರದೇಶವನ್ನು ಮಾತ್ರ ಡಿಮ್ಡ್ ಫಾರೆಸ್ಟ್ ಎಂದು ಗುರುತಿಸಲಾಗಿದ್ದು, ಉಳಿದೆಲ್ಲಾ ಜಮೀನನ್ನು ಕಂದಾಯ ಇಲಾಖೆಗೆ ವಾಪಾಸ್ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ. ವಿಧಾನಪರಿಷತ್‍ನ ಪ್ರಶ್ನೋತ್ತರ ವೇಳೆಯಲ್ಲಿಂದು ಕೇಳಲಾದ ಪ್ರಶ್ನೆಗೆ ಸರ್ಕಾರದ ಪರವಾಗಿ ಇಬ್ಬರು ಸಚಿವರು ಉತ್ತರಿಸಿದ್ದಾರೆ. ಸದಸ್ಯ ಕೆ.ಕೆ.ಹರೀಶ್‍ಕುಮಾರ್, ರಾಜ್ಯದಲ್ಲಿ 9,94,881.11 ಹೆಕ್ಟರ್ ಪ್ರದೇಶವನ್ನು ಡಿಮ್ಡ್ ಫಾರೆಸ್ಟ್ ಸ್ಥಾನದಿಂದ ಹಿಂಪಡೆಯಲಾಗಿದೆಯೇ ಎಂದು ಪ್ರಶ್ನಿಸಿದರು. ಆರಂಭದಲ್ಲಿ ಉತ್ತರ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿರುವ ಜಿಲ್ಲಾ ಮಟ್ಟದ […]

ವೈದ್ಯಕೀಯ ಸಿಬ್ಬಂದಿ ನೇಮಕಾತಿ ವಿಳಂಬ : ಮೇಲ್ಮನೆಯಲ್ಲಿ ಪ್ರತಿಪಕ್ಷ ಅಸಮಾಧಾನ

ಬೆಳಗಾವಿ,ಡಿ.28- ಪಶು ಸಂಜೀವಿನಿ ಯೋಜನೆಗೆ ಕೇಂದ್ರ ಸರ್ಕಾರದ ನೆರವಿನಲ್ಲಿ 275 ಆ್ಯಂಬುಲೆನ್ಸ್‍ಗಳನ್ನು ಖರೀದಿ ಮಾಡಲಾಗಿದ್ದರೂ, ಈವರೆಗೂ ವೈದ್ಯಕೀಯ, ಇತರ ಸಿಬ್ಬಂದಿಗಳನ್ನು ನೇಮಿಸದಿರುವ ಕುರಿತು ವಿಧಾನ ಪರಿಷತ್‍ನಲ್ಲಿ ಪ್ರತಿಪಕ್ಷದ ಸದಸ್ಯರು ಅಸಮಾಧಾನ ವ್ಯಕ್ತ ಪಡಿಸಿದ ಘಟನೆ ನಡೆಯಿತು. ಪ್ರಶ್ನೋತ್ತರದ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಎಸ್.ರವಿ, ರಾಜ್ಯದಲ್ಲಿ ಚರ್ಮಗಂಟು ರೋಗದಿಂದ 28 ಸಾವಿರ ಜಾನುವಾರುಗಳ ಸಾವನ್ನಪ್ಪಿವೆ. ಜುಲೈನಲ್ಲಿ ಪಶು ಸಂಜೀವಿನಿ ಯೋಜನೆ ಜಾರಿ ಮಾಡಲಾಗಿದೆ. ಭಾರೀ ಜಾಹಿರಾತ ನೀಡಿ ಪ್ರಚಾರ ಪಡೆಯಲಾಗಿದೆ. ಪ್ರತಿ ವಾಹನಕ್ಕೆ ಮೂರು ಮಂದಿ ಸಿಬ್ಬಂದಿ ಬೇಕು. […]

ಅಗಲಿದ ಗಣ್ಯರಿಗೆ ಮೇಲ್ಮನೆಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ

ಬೆಳಗಾವಿ,(ಸುವರ್ಣ ಸೌಧ)ಡಿ.19- ವಿಧಾನಸಭೆಯ ಉಪಾಧ್ಯಕ್ಷರಾಗಿದ್ದ ಶಾಸಕ ಆನಂದ ಮಾಮನಿ ಸೇರಿದಂತೆ ಇತ್ತೀಚೆಗೆ ಅಗಲಿದ ಹನ್ನೊಂದು ಮಂದಿ ಗಣ್ಯರಿಗೆ ವಿಧಾನ ಪರಿಷತ್ತಿನಲ್ಲಿಂದು ಭಾವ ಪೂರ್ಣ ಸಂತಾಪ ಸೂಚಿಸಲಾಯಿತು. ಚಳಿಗಾಲದ ಅಧಿವೇಶನದ ಮೊದಲ ದಿನವಾದ ಇಂದು ವಂದೇ ಮಾತರಂ ಗೀತೆಯೊಂದಿಗೆ ಸದನ ಸಮಾವೇಶಗೊಂಡಾಗ ಸಭಾಪತಿ ರಘನಾಥರಾವ್ ಮಲ್ಕಾಪುರೆ ಅವರು ಸಂತಾಪ ಸೂಚನಾ ನಿರ್ಣಯ ಮಂಡಿಸಿದರು. ಇತ್ತೀಚೆಗೆ ನಿಧನರಾದ ಉಪ ಸಭಾಧ್ಯಕ್ಷರಾಗಿದ್ದ ವಿಧಾನಸಭೆ ಸದಸ್ಯ ಆನಂದ ಮಾಮನಿ, ಮಾಜಿ ಸಚಿವರಾದ ಜಬ್ಬಾರ್ ಖಾನ್ ಹೊನ್ನಳ್ಳಿ, ಸುೀಂದ್ರರಾವ್ ಕಸಬೆ, ವಿಧಾನ ಪರಿಷತ್ತಿನ ಮಾಜಿ […]

ವಿಧಾನಪರಿಷತ್ ಚುನಾವಣೆ : ನಾಮಪತ್ರ ಸಲ್ಲಿಸಿದ ಬಾಬುರಾವ್ ಚಿಂಚನಸೂರ್

ಬೆಂಗಳೂರು,ಆ.1- ವಿಧಾನಸಭೆಯಿಂದ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಇಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಉಪಾಧ್ಯಕ್ಷ ನಿರ್ಮಲ್‍ಕುಮಾರ್ ಸುರಾನ ಸೇರಿದಂತೆ ಪಕ್ಷದ ಮುಖಂಡರ ಜೊತೆಗೆ ಆಗಮಿಸಿದ ಅವರು, ಚುನಾವಣೆ ಅಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು. ಕಾಂಗ್ರೆಸ್ ಹಾಗೂ ಜೆಡಿಎಸ್‍ಗೆ ಬಹುಮತ ಲಭ್ಯವಿಲ್ಲದೇ ಇರುವುದರಿಂದ ಬಾಬೂರಾವ್ ಚಿಂಚನಸೂರ್ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ […]

ಆಗಸ್ಟ್ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ..? ವಿಜಯೇಂದ್ರಗೆ ಚಾನ್ಸ್..?

ಬೆಂಗಳೂರು,ಜು.26- ಆಗಸ್ಟ್ ಮೊದಲ ವಾರದಲ್ಲಿ ರಾಜ್ಯ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಹೈಕಮಾಂಡ್ ಮಣೆ ಹಾಕುವ ಸಾಧ್ಯತೆಯಿದೆ. ಬಿ. ವೈ.ವಿಜಯೇಂದ್ರ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಯಡಿಯೂರಪ್ಪ ಘೋಷಿಸಿದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಕಳೆದ ಕೆಲವು ದಿನಗಳಿಂದ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. 2023ರ ವಿಧಾನಸಭಾ ಚುನಾವಣೆಯಲ್ಲಿ ವೀರಶೈವ-ಲಿಂಗಾಯತ ಸಮುದಾಯದಲ್ಲಿ ಅವರನ್ನು ಬಳಸಿಕೊಳ್ಳಲು ಯೋಜಿಸಿದ್ದರಿಂದ ಯಡಿಯೂರಪ್ಪನವರು ರಾಜಕೀಯದಿಂದ […]