ಸಭಾಪತಿ ಸ್ಥಾನಕ್ಕೆ RSS ಅಡ್ಡಿ, ಹೊರಟ್ಟಿ ಅತಂತ್ರ

ಬೆಂಗಳೂರು,ಸೆ.21- ಪಶ್ಚಿಮ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರನ್ನು ಪರಿಷತ್‍ನ ಸಭಾಪತಿ ಸ್ಥಾನಕ್ಕೆ ನೇಮಿಸಲು ಮೂಲ ಬಿಜೆಪಿ ಮತ್ತು ಆರ್‍ಎಸ್‍ಎಸ್ ನಾಯಕರು ವಿರೋಧಿಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ಶಾಸಕ ಜಗದೀಶ್ ಶೆಟ್ಟರ್ ಅವರು ಬಸವರಾಜ ಹೊರಟ್ಟಿ ಅವರಿಗೆ ನೀಡಿದ ಭರವಸೆಯನ್ನು ಉಳಿಸಿಕೊಳ್ಳುವ ಅನಿವಾರ್ಯತೆ ಎದುರಾಗಿದೆ. ಬಸವರಾಜ ಹೊರಟ್ಟಿ ಅವರನ್ನು ಮತ್ತೆ ವಿಧಾನಪರಿಷತ್ತಿನ ಸಭಾಪತಿಯನ್ನಾಗಿ ಮಾಡುವುದಾಗಿ ಕೊಟ್ಟ […]

ಸಚಿವರು-ಮಾಜಿ ಸಚಿವರ ಆರೋಪ : ವಿಧಾನ ಪರಿಷತ್ ನಲ್ಲಿ ಕೋಲಾಹಲ

ಬೆಂಗಳೂರು,ಸೆ.20- ಕಡತ ವಿಲೇವಾರಿಗೆ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ಸರ್ಕಾರದ ಹಾಲಿ ಸಚಿವರು, ಮಾಜಿ ಸಚಿವರು ಮಾಡಿದ ಆರೋಪ ವಿಧಾನ ಪರಿಷತ್ ನಲ್ಲಿ ಕೋಲಾಹಲದ ವಾತಾವರಣ ನಿರ್ಮಿಸಿತು. ಪ್ರಶ್ನೋತ್ತರದಲ್ಲಿ ಸದಸ್ಯ ಸುನೀಲ್ ವಲ್ಯಾಪುರ್ ಅವರು ಸಕ್ಕರೆ ಕಾರ್ಖಾನೆಗಳಿಗೆ ಎಥೆನಾಲ್ ಉತ್ಪಾದಿಸಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಅದಕ್ಕೆ ಉತ್ತರ ನೀಡಿದ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಸರ್ಕಾರಿ ವಲಯದ ಯಾವುದೇ ಸಕ್ಕರೆ ಕಾರ್ಖಾನೆಗಳು ಇಲ್ಲ. 3 ಸಹಕಾರಿ, 10 ಖಾಸಗಿ […]

ಸಭಾಪತಿ ಚುನಾವಣೆ : ಸರ್ಕಾರದ ನಿಲುವು ಇಂದು ಸ್ಪಷ್ಟನೆ

ಬೆಂಗಳೂರು,ಸೆ.20-ವಿಧಾನಪರಿಷತ್ ಸಭಾಪತಿ ಸ್ಥಾನದ ಚುನಾವಣೆ ನಡೆಸುವ ಕುರಿತು ಸರ್ಕಾರ ನಿಲುವು ಏನೆಂಬುದು ಇಂದು ಗೊತ್ತಾಗಲಿದೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ ಗುರುವಾರ ಸಭಾಪತಿ ಸ್ಥಾನದ ಚುನಾವಣೆ ನಡೆದು ಬಿಜೆಪಿಯ ಹಿರಿಯ ಸದಸ್ಯ ಬಸವರಾಜ ಹೊರಟ್ಟಿಯವರು ಆಯ್ಕೆಯಾಗುವ ಸಂಭವವೇ ಹೆಚ್ಚಾಗಿತ್ತು. ಆದರೆ ಬಿಜೆಪಿಯಲ್ಲಿ ನಡೆದ ಕೆಲವು ಮಿಂಚಿನ ಬೆಳವಣಿಗೆಯಿಂದ ಹೊರಟ್ಟಿಗೆ ಸಭಾಪತಿ ಸ್ಥಾನ ಸಿಗುವುದೇ ಅನುಮಾನವಾಗಿದೆ. ಏಕೆಂದರೆ ಪಕ್ಷದಲ್ಲಿರುವ ಕೆಲವು ಹಿರಿಯರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಗುರುವಾರದೊಳಗೆ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ […]

ಪ್ಲಾಸ್ಟಿಕ್ ನಿರ್ವಹಣೆಗೆ ಕಟ್ಟು ನಿಟ್ಟಿನ ಕ್ರಮ

ಬೆಂಗಳೂರು,ಸೆ.19- ಪರಿಸರಕ್ಕೆ ಗಂಭೀರ ಸವಾಲೊಡ್ಡುವ ಪ್ಲಾಸ್ಟಿಕ್ ನಿರ್ವಹಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಬದ್ದವಾಗಿದೆ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದರು. ವಿಧಾನಪರಿಷತ್‍ನಲ್ಲಿ ಸದಸ್ಯರಾದ ಮುನಿರಾಜು ಗೌಡ ಮತ್ತು ಪ್ರಕಾಶ್ ಕೆ.ರಾಥೋಡ್ ಅವರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ ಪ್ರತಿದಿನ 830.36 ಟನ್ ಪ್ಲಾಸ್ಟಿಕ್ ತ್ಯಾಜ್ಯ ಉತ್ಪಾದನೆಯಾಗುತ್ತಿದೆ. ಅದರಲ್ಲಿ ಬೆಂಗಳೂರುವೊಂದರಲ್ಲೆ 317.42 ಟನ್ ಪ್ಲಾಸ್ಟಿಕ್ ತ್ಯಾಜ್ಯ ಉತ್ಪಾದನೆಯಾಗುತ್ತಿದೆ ಎಂದರು. 2016 ಮಾರ್ಚ್ 11ರಂದು ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆ, ತಯಾರಿಕೆ, ಸರಬರಾಜು, ಸಂಗ್ರಹಣೆ, […]

ಮೇಲ್ಮನೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆ, ಸುದೀರ್ಘ ಚರ್ಚೆ

ಬೆಂಗಳೂರು, ಸೆ.15- ವಿಧಾನಸಭೆಯಲ್ಲಿ ಈಗಾಗಲೇ ಅಂಗೀಕಾರಗೊಂಡಿರುವ ಮತಾಂತರ ನಿಷೇಧ ಕಾಯ್ದೆಯನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ವಿಧಾನ ಪರಿಷತ್ನಲ್ಲಿಂದು ಮಂಡಿಸಿದಾಗ ಕಾಯ್ದೆಯ ಮೇಲೆ ಸುದೀರ್ಘ ಚರ್ಚೆ ನಡೆಯಿತು.ಪ್ರಶ್ನೋತ್ತರ ಮತ್ತು ಶೂನ್ಯ ವೇಳೆಯ ಬಳಿಕ ಸಭಾಪತಿ ರಘುನಾಥ ರಾವ್ ಮಲ್ಕಾಪುರೆ ಮಂಡನೆಗೆ ಅವಕಾಶ ಕಲ್ಪಿಸಿದರು. ಸಚಿವ ಅರಗ ಜ್ಞಾನೇಂದ್ರ, ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕವನ್ನು ಮಂಡಿಸಿ, ಇದು ಮಹತ್ವದ ಕಾಯ್ದೆ, ಪರಿಸ್ಥಿತಿ ಎಲ್ಲರಿಗೂ ಅರಿವಿದೆ. 2013ರಲ್ಲಿ ಕಾಂಗ್ರೆಸ್ ಸರ್ಕಾರವು ಈ ಕಾಯ್ದೆ ಕುರಿತು ಚಿಂತನೆ ನಡೆಸಿದೆ. […]

ಪಿಎಸ್ಐ ನೇಮಕಾತಿ ಹಗರಣ: ವಿಧಾನಸಭೆಯಲ್ಲಿ ಕೋಲಾಹಲ

ಬೆಂಗಳೂರು,ಸೆ.15-ರಾಜ್ಯಾದ್ಯಂತ ಭಾರೀ ವಿವಾದ ಸೃಷ್ಟಿಸಿರುವ ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ಕುರಿತು ನಿಯಮ 60ರಡಿ ಚರ್ಚೆಗೆ ಅವಕಾಶ ಕೊಡಬೇಕೆಂದು ಪ್ರತಿಪಕ್ಷ ಕಾಂಗ್ರೆಸ್ ಪಟ್ಟು ಹಿಡಿದ ಪರಿಣಾಮ ವಿಧಾನಸಭೆಯಲ್ಲಿಂದು ಕೋಲಾಹಲ, ಗದ್ದಲ ಉಂಟಾಯಿತು. ಪ್ರಶ್ನೋತ್ತರ ಕಲಾಪ ಮುಗಿದ ಬಳಿಕ ಸಿದ್ದರಾಮಯ್ಯನವರು ವಿಷಯ ಪ್ರಸ್ತಾಪಿಸಿ, ಇದೊಂದು ಅತ್ಯಂತ ಗಂಭೀರವಾದ ವಿಷಯ. ಹಿರಿಯ ಪೊಲೀಸ್ ಅಧಿಕಾರಿಗಳೇ ಹಗರಣದಲ್ಲಿ ಭಾಗಿಯಾಗಿ ಜೈಲಿಗೆ ಹೋಗಿದ್ದಾರೆ. ಅನೇಕರ ಮೇಲೆ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದೆ. ಹೀಗಾಗಿ ನಿಯಮ 60ರಡಿ ಚರ್ಚೆಗೆ ಅವಕಾಶ ಕೊಡಬೇಕೆಂದು ನಿಲುವಳಿ ಮಂಡಿಸಿದರು. ಪಿಎಸ್ಐ […]

ಬಿಟ್ ಕಾಯಿನ್ ಹಗರಣ ಗಾಳಿಯಲ್ಲಿ ಗಂಟು ಇದ್ದಂತೆ : ಅರಗ ಜ್ಞಾನೇಂದ್ರ

ಬೆಂಗಳೂರು, ಸೆ.15- ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಬಿಟ್ ಕಾಯಿನ್ ಹಗರಣ ಗಾಳಿಯಲ್ಲಿ ಗಂಟು ಇದ್ದಂತೆ, ಇದರಲ್ಲಿ ಏನೂ ಇಲ್ಲ. ಹಣ ಕಳೆದುಕೊಂಡವರು ಯಾರು ದೂರು ನೀಡಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟ ಪಡಿಸಿದ್ದಾರೆ. ವಿಧಾನಪರಿಷತ್‍ನ ಪ್ರಶ್ನೋತ್ತರದ ಅವಧಿಯಲ್ಲಿ ಜೆಡಿಎಸ್ ಸದಸ್ಯ ಟಿ.ಶರವಣ ಕೇಳಿದ ಪ್ರಶ್ನೆಗೆ ಉರಿಸಿದ ಅವರು, ಬಿಟ್ ಕಾಯಿನ್ ವಂಚನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನ ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಸೇರಿದಂತೆ ಆರು ಮಂದಿಯನ್ನು […]

ಬಸವರಾಜ ಹೊರಟ್ಟಿಗೆ ಮತ್ತೆ ಸಭಾಪತಿ ಪಟ್ಟ

ಬೆಂಗಳೂರು,ಸೆ.15- ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕಾದ ಅನಿವಾರ್ಯತೆಗೆ ಸಿಲುಕಿರುವ ಆಡಳಿತಾರೂಢ ಬಿಜೆಪಿ ಹಿರಿಯ ಸದಸ್ಯ ಬಸವರಾಜ ಹೊರಟ್ಟಿಯವರನ್ನು ಸಭಾಪತಿ ಚುನಾವಣೆಯ ಕಣಕ್ಕಿಳಿಸಲು ನಿರ್ಧರಿಸಿದೆ. ಮೂಲಗಳ ಪ್ರಕಾರ ಇದೇ 20 ಮತ್ತು 21ರಂದು ವಿಧಾನಪರಿಷತ್‍ನ ಸಭಾಪತಿ ಚುನಾವಣೆ ನಡೆಯಲಿದ್ದು, ಬಸವರಾಜ ಹೊರಟ್ಟಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಬಿಜೆಪಿ ತೀರ್ಮಾನಿಸಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಗೆ ಹೊರಟ್ಟಿ ಅವರ ಒಂದೇ ಹೆಸರನ್ನು ಶಿಫಾರಸ್ಸು ಮಾಡಬೇಕೆಂಬ ತೀರ್ಮಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ನಾಯಕರು ಸರ್ವ ಸಮ್ಮತದಿಂದ ತೆಗೆದುಕೊಂಡಿದ್ದಾರೆ.ಸಭಾಪತಿ ಸ್ಥಾನಕ್ಕೆ ಹಂಗಾಮಿ […]

ಖಾಸಗಿ ಹೋಟೆಲ್‍ನಲ್ಲಿ ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ

ಬೆಂಗಳೂರು,ಸೆ.13- ಸದನದಲ್ಲಿ ಪ್ರತಿಪಕ್ಷಗಳ ಅಸ್ತ್ರಕ್ಕೆ ಪ್ರತ್ಯಾಸ್ತ್ರ ರೂಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಂಜೆ ಮಹತ್ವದ ಶಾಸಕಾಂಗ ಸಭೆ ನಡೆಯಲಿದೆ. ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆಯಲಿರುವ ಸಭೆಗೆ ಸಿಎಂ ಬೊಮ್ಮಾಯಿ, ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಕಡ್ಡಾಯವಾಗಿ ಪಾಲ್ಗೊಳ್ಳ ಬೇಕೆಂದು ಮುಖ್ಯ ಸಚೇತಕರು ಸೂಚನೆ ಕೊಟ್ಟಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಪ್ರತಿ ಪಕ್ಷ ಕಾಂಗ್ರೆಸ್ ಮುಗಿಬೀಳಲು ಸಜ್ಜಾಗಿದೆ. ಇದಕ್ಕೆ ಪ್ರತಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯನವರ ಅಧಿಕಾರ ಅವಧಿಯಲ್ಲಿ ನಡೆದಿರುವ ಹಗರಣಗಳ ಕುರಿತಂತೆ ಸದನದಲ್ಲಿ ಪ್ರಸ್ತಾಪಿಸಲು ಸಿದ್ದವಾಗಿದೆ. […]

ಮೇಲ್ಮನೆಯಲ್ಲಿ ಬಿಜೆಪಿಗೆ ಬಹುಮತ, ಮತಾಂತರ ನಿಷೇಧ ಮಸೂದೆ ಮಂಡಿಸಲು ಸಿದ್ಧತೆ

ಬೆಂಗಳೂರು,ಆ.6- ವಿಧಾನಪರಿಷತ್‍ನಲ್ಲಿ ಆಡಳಿತಾರೂಢ ಬಿಜೆಪಿಗೆ ಪೂರ್ಣ ಬಹುಮತ ಲಭಿಸಿರುವ ಕಾರಣ ಮುಂಬರುವ ಅಧಿವೇಶನದಲ್ಲಿ ಕರ್ನಾಟಕ ಧಾರ್ಮಿಕ ಸ್ವತಂತ್ರ ಹಕ್ಕು ಸಂರಕ್ಷಣಾ( ಮತಾಂತರ ನಿಷೇಧ) ಮಸೂದೆಯನ್ನು ಮಂಡಿಸಲು ತೀರ್ಮಾನಿಸಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆಯಿಂದ ತೆರವಾಗಿದ್ದ ಮೇಲ್ಮನೆಯ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ವಿಧಾನಪರಿಷತ್‍ನ ಒಟ್ಟು 75 ಸದಸ್ಯ ಬಲದಲ್ಲಿ ಬಿಜೆಪಿಗೆ 40 ಸ್ಥಾನಗಳು ಇರುವುದರಿಂದ ಮುಂಬರುವ ಅಧಿವೇಶನದಲ್ಲಿ ಈ ಕಾಯ್ದೆಯನ್ನು ಮಂಡಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲು ತೀರ್ಮಾನಿಸಿದೆ. ಕಳೆದ […]