ಲಿಮ್ಕಾ ದಾಖಲೆ ಬರೆದ ಬೃಹತ್ ತ್ರಿವರ್ಣ ಧ್ವಜ

ಕೋಲಾರ, ಆ.16- ಸ್ವಾತಂತ್ರ್ಯದ 75 ಸಂವತ್ಸರಗಳನ್ನು ಪೂರೈಸಿದ ಸಂಭ್ರಮದಲ್ಲಿ ಜಿಲ್ಲೆಯಲ್ಲಿ ಬೃಹತ್ ತ್ರಿವರ್ಣ ಧ್ವಜ ಪ್ರದರ್ಶಿಸಿ ಲಿಮ್ಕಾ ಪುಸ್ತಕದಲ್ಲಿ ದಾಖಲೆ ನಿರ್ಮಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೋಲಾರ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪ್ರಧಾನ ಮಂತ್ರಿಗಳ ಹರ್ ಘರ್ ತಿರಂಗಾ ಅಭಿಯಾನದ ಕರೆಗೆ ಓಗೊಟ್ಟು ಸಂಸದ ಎಸ್.ಮುನಿಸ್ವಾಮಿ ಅವರ ನೇತೃತ್ವದಲ್ಲಿ ದೇಶದ ಅತಿ ದೊಡ್ಡ ರಾಷ್ಟ್ರಧ್ವಜವನ್ನು ಕ್ರೀಡಾಂಗಣದ ಉದ್ದಗಲಕ್ಕೂ ಪ್ರದರ್ಶಿಸಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ರಕ್ಷಣಾ ಇಲಾಖೆಯ ಸೇನಾ ಹೆಲಿಕಾಪ್ಟರ್‍ನಿಂದ ಪುಷ್ಪವೃಷ್ಟಿ ಸಲ್ಲಿಸಲಾಯಿತು.ಆ ಕ್ಷಣದಲ್ಲಿ ಕ್ರೀಡಾಂಗಣದಲ್ಲಿ […]