ಮುರುಘಾ ಶ್ರೀಗಳಿಂದ ಲಿಂಗ ದೀಕ್ಷೆ ಪಡೆದ ರಾಹುಲ್‍ಗಾಂಧಿ

ಚಿತ್ರದುರ್ಗ, ಆ.3- ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಮುರುಘಾ ಮಠಕ್ಕೆ ಭೇಟಿ ನೀಡಿದ್ದ ವೇಳೆ ಅವರಿಗೆ ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರು ಲಿಂಗದೀಕ್ಷೆ ನೀಡಿದ್ದಾರೆ. ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದಂತೆ ಮಠದ ಕರ್ತೃ ಶ್ರೀ ಮುರುಘಾ ಶಾಂತವೀರ ಸ್ವಾಮೀಜಿ ಗದ್ದುಗೆಗೆ ಭೇಟಿ ನೀಡಿದ ರಾಹುಲ್ ಗಾಂಧಿ ಅವರು, ಗದ್ದುಗೆಗೆ ಪುಷ್ಪಾರ್ಚನೆ ಮಾಡಿ ಕೆಲ ಸಮಯ ಧ್ಯಾನ ಮಾಡಿದರು. ಈ ಸಂದರ್ಭದಲ್ಲಿ ಶ್ರೀಗಳು ರಾಹುಲ್ ಗಾಂಧಿಯವರಿಗೆ ದೀಕ್ಷೆ ನೀಡಿದರು. ದೀಕ್ಷೆ ಪಡೆದ ನಂತರ ನಮಗೆ ಲಿಂಗಪೂಜೆ ಇತ್ಯಾದಿಗಳ ಕುರಿತು […]