ರಾಜ್ಯದಲ್ಲಿ ಮತ್ತೆ ಲೋಡ್ ಶೆಡ್ಡಿಂಗ್ ಜಾರಿಗೆ ಸರ್ಕಾರ ಚಿಂತನೆ

ಬೆಂಗಳೂರು,ಫೆ.28- ಒಂದು ಕಡೆ ಬೇಸಿಗೆ ಸಮೀಪಿಸುತ್ತಿರುವ ಬೆನ್ನಲ್ಲೇ ಮತ್ತೊಂದು ಜಲಾಶಯಗಳಲ್ಲಿ ನೀರಿನ ಪ್ರಮಾಣ ಕುಸಿಯುತ್ತಿರುವ ಪರಿಣಾಮ ರಾಜ್ಯದಲ್ಲಿ ಮತ್ತೆ ಲೋಡ್ ಶೆಡ್ಡಿಂಗ್ ಜಾರಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ.ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಲೋಡ್‍ಶೆಡ್ಡಿಂಗ್‍ಗೆ ಕೈ ಹಾಕಿಲ್ಲ. ಆದರೆ, ಮುಂದಿನ ದಿನಗಳಲ್ಲಿ ರಾಜ್ಯಕತ್ತಲೆಯಲ್ಲಿ ಮುಳುಗುವುದು ಬಹುತೇಕ ಖಚಿತವಾಗಿದೆ.ರಾಜಧಾನಿ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳು ಹಾಗೂ ಗ್ರಾಮೀಣ ಭಾಗಗಳಲ್ಲಿ ಲೋಡ್‍ಶೆಡ್ಡಿಂಗ್ ಅಳವಡಿಸುವ ಬಗ್ಗೆ ರಾಜ್ಯ ಸರ್ಕಾರ ಗಂಭೀರ ಚಿಂತನೆಯಲ್ಲಿದೆ. ಎಲ್ಲಾ ಮೂಲಗಳಿಂದ ಸದ್ಯ 5500 […]