ತುಮಕೂರು ರಸ್ತೆ ಮೇಲ್ಸೇತುವೆ ಸಂಚಾರಕ್ಕೆ ಯೋಗ್ಯವಲ್ಲ : ಸಿಎಂ 

ಬೆಂಗಳೂರು, ಜ.15- ರಾಷ್ಟ್ರೀಯ ಹೆದ್ದಾರಿ-4ರ ತುಮಕೂರು ರಸ್ತೆ ಮೇಲ್ಸೇತುವೆ ಕಳಪೆ ಕಾಮಗಾರಿಯಿಂದ ಆಗಿದ್ದು, ಭಾರೀ ವಾಹನ ಸಂಚಾರಕ್ಕೆ ಯೋಗ್ಯವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಗೆ ತಿಳಿಸಿದರು. ಶೂನ್ಯವೇಳೆಯಲ್ಲಿ ಜೆಡಿಎಸ್ ಶಾಸಕ ಆರ್. ಮಂಜುನಾಥ್ ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಭಾರೀ ವಾಹನ ಸಂಚಾರಕ್ಕೆ ಯೋಗ್ಯವಾಗಿಲ್ಲದ ಕಾರಣ ಹೊಸದಾಗಿ ಮೇಲ್ಸೇತುವೆ ಮಾಡಬೇಕಾಗಿದೆ. ಈ ಸಂಬಂಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೂ ಪತ್ರ ಬರೆದು ಮನವಿ ಮಾಡಲಾಗಿದೆ ಎಂದರು. ಲಘು ವಾಹನಗಳ ಸಂಚಾರಕ್ಕೆ ಅವಕಾಶ ಮಾಡುವಂತೆ ರಾಷ್ಟ್ರೀಯ […]