ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಇಲ್ಲ : ಸುನೀಲ್ ಕುಮಾರ್

ಉಡುಪಿ,ಅ.22-ರಾಜ್ಯದಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿ ಮಳೆಯಾದ ಪರಿಣಾಮ ಜಲಾಶಯಗಳು ಭರ್ತಿಯಾಗಿರುವ ಕಾರಣ ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಮಾಡುವ ಪ್ರಸ್ತಾವನೆ ರಾಜ್ಯ ಸರ್ಕಾರದ ಮುಂದೆ ಇಲ್ಲ ಎಂದು ಇಂಧನ ಸಚಿವ ಸುನೀಲ್‍ಕುಮಾರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವ್ಯಾಪಕ ಮಳೆಯಾಗಿ ಜಲಾಶಯಗಳು ಅಧಿವಗೂ ಮುನ್ನವೇ ಭರ್ತಿಯಾಗಿವೆ. ಹೀಗಾಗಿ ಲೋಡ್ ಶೆಡ್ಡಿಂಗ್ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ದೀಪಾವಳಿ ಹಬ್ಬದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಅನುಮಾನ ಬೇಡ. ಬೆಳಕಿನ ಹಬ್ಬವನ್ನು […]