ಲಾಕ್‍ಡೌನ್ ಜಾರಿ ಬಗ್ಗೆ ಚರ್ಚೆಯಾಗಿಲ್ಲ : ಗೌರವ್‍ಗುಪ್ತಾ

ಬೆಂಗಳೂರು,ಜ.12-ನಗರದಲ್ಲಿ ಸೋಂಕು ಉಲ್ಬಣಗೊಳ್ಳುತ್ತಿದೆ ಆದರೂ ಲಾಕ್‍ಡೌನ್ ಜಾರಿ ಬಗ್ಗೆ ಯಾವುದೆ ಚರ್ಚೆ ನಡೆದಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು 15 ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ. ಭವಿಷ್ಯದಲ್ಲಿ ಸೋಂಕು ಮತ್ತಷ್ಟು ಹೆಚ್ಚುವುದು ಖಚಿತ. ಸೋಂಕು ಹರಡುವಿಕೆ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಆದರೆ, ಲಾಕ್‍ಡೌನ್ ಜಾರಿ ಬಗ್ಗೆ ಇದುವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. ಸೋಂಕು ಹರಡದಂತೆ ನೋಡಿಕೊಳ್ಳಬೇಕಾದರೆ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ […]