ಮತದಾರರ ಮಾಹಿತಿಗೆ ಕನ್ನ : ಚಿಲುಮೆ ಸಂಸ್ಥೆ ಲೋಕೇಶನಿಗೆ ಪೊಲೀಸರ ಗ್ರಿಲ್

ಬೆಂಗಳೂರು,ನ.18- ಮತದಾರರ ವೈಯಕ್ತಿಕ ಮಾಹಿತಿ ಕಳವು ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಚಿಲುಮೆ ಸಂಸ್ಥೆಯ ಕೆ.ಎಂ.ಲೋಕೇಶ್ ಎಂಬುವವರನ್ನು ತೀವ್ರ ವಿಚಾರಣೆಗೊಳಪಡಿಸಲು ಪೊಲೀಸರು ತೀರ್ಮಾನಿಸಿದ್ದಾರೆ. ಲೋಕೇಶ್ ಅವರಿಗೆ ನೋಟಿಸ್ ಜಾರಿ ಮಾಡಿ ಶೀಘ್ರದಲ್ಲೇ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲು ತೀರ್ಮಾನಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂಜೆಗೆ ತಿಳಿಸಿದ್ದಾರೆ. ಮತದಾರರ ವೈಯಕ್ತಿಕ ಮಾಹಿತಿ ಕಳವು ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದ್ದಂತೆ ಯಾವುದೇ ಅನುಮತಿಇಲ್ಲದೆ ಇಂತಹ ಕಾರ್ಯಕ್ಕೆ ಕೈ ಹಾಕಿದ್ದ ಚಿಲುಮೆ ಸಂಸ್ಥೆ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿವೆ. ಕಾಡುಗೋಡಿ […]