ವಾಯುಭಾರ ಕುಸಿತ, ರಾಜ್ಯದಲ್ಲಿ ಇನ್ನೆರಡು ದಿನ ಮಳೆ

ಬೆಂಗಳೂರು,ನ.22- ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಬೆಳಗ್ಗೆಯಿಂದಲೇ ತುಂತುರು ಮಳೆಯಾಗುತ್ತಿದೆ. ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ ಮಳೆ ಮತ್ತೆ ಆರಂಭವಾಗಿದೆ. ಬೆಳಗ್ಗೆಯಿಂದಲೇ ಪದೇ ಪದೇ ಹಗುರ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ನಗರ ಪ್ರದೇಶಗಳಲ್ಲಿ ದೈನಂದಿನ ಕೆಲಸಗಳಿಗೆ ತೆರಳುವವರು ಕೊಡೆ, ಜರ್ಕಿನ್‍ಗಳ ಮೊರೆ ಹೋಗಿದ್ದ ದೃಶ್ಯ ಸಾಮಾನ್ಯವಾಗಿತ್ತು. ಆಗಾಗ್ಗೆ ತಂಪಾದ ಮೇಲ್ಮೈ ಗಾಳಿ ಬೀಸುತ್ತಿರುವುದರಿಂದ ಚಳಿಯ ಪ್ರಮಾಣವೂ ಹೆಚ್ಚಾಗಿದೆ. ರಾಜ್ಯದ ದಕ್ಷಿಣ […]
ಚೀನಾ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಭಾರತ, ಯಾವ ಕ್ಷೇತ್ರದಲ್ಲಿ ಗೊತ್ತೇ..?

ಬೆಂಗಳೂರು, ಅ.27- ಉತ್ಪಾದನಾ ವೆಚ್ಚ ಕಡಿಮೆ ಹೊಂದಿರುವ ದೇಶಗಳ ಪಟ್ಟಿಯಲ್ಲಿ ಭಾರತ ಚೀನಾವನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ್ದು, ಜಾಗತಿಕವಾಗಿ ಹೊಸ ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. ಅಮೆರಿಕಾದ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯ ಕೋವಿಡ್ ಬಳಿಕ ಭಾರತದ ಚೀನಾದ ದಶಕಗಳ ಅಪತ್ಯವನ್ನು ಮುರಿದು ಮುನ್ನುಗ್ಗಿದೆ. ಭಾರತದಲ್ಲಿನ ಕಾರ್ಮಿಕ ವೆಚ್ಚ ಹಾಗೂ ಕಚ್ಚಾ ಸರಕುಗಳ ಬೆಲೆ ಕಡಿಮೆ ಇರುವುದರಿಂದ ಉತ್ಪಾದನಾ ವೆಚ್ಚವೂ ಕಡಿಮೆಯಾಗಿದೆ. ಜಾಗತಿಕವಾಗಿ 80 ದೇಶಗಳನ್ನು ಸಮೀಕ್ಷೆಗೆ ಒಳಪಡಿಸಲಾಗಿದ್ದ, ಸುಮಾರು 20 ಸಾವಿರ ಮಂದಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಸಿದ್ಧ […]