ಮಾಡಾಳ್ಗೆ `ಲೋಕಾ’ ಡ್ರಿಲ್

ಬೆಂಗಳೂರು, ಮಾ.28- ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಸಂಸ್ಥೆಯಲ್ಲಿ ನಡಿದಿದೆ ಎನ್ನಲಾದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ತಡರಾತ್ರಿಯವರೆಗೂ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಇಂದು ಸಂಜೆ ಜನಪ್ರತಿನಿಧಿ ಕೋರ್ಟ್ ಮುಂದೆ ವಿರೂಪಾಕ್ಷಪ್ಪ ಅವರನ್ನು ಹಾಜರುಪಡಿಸಲಿದ್ದು ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿ ಕೇಳುವ ನಿರೀಕ್ಷೆಯಿದೆ. ಇನ್ನು ಶಾಸಕರ ಪರವಾದ ವಕೀಲರು ಜಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಸುಪ್ರಿಂಕೋರ್ಟ್ನಲ್ಲಿ ಲೋಕಾಯುಕ್ತ ಪೊಲೀಸರು ಮೇಲ್ಮನವಿ ಅರ್ಜಿ ಸಲ್ಲಿಸಿ ಅದು ವಿಚಾರಣೆಗೆ […]
ಸುಪ್ರೀಂನಲ್ಲಿ ಮಾಡಾಳ್ ಜಾಮೀನು ಪ್ರಶ್ನಿಸಲು ಮುಂದಾದ ಲೋಕಾಯುಕ್ತ

ಬೆಂಗಳೂರು,ಮಾ.10- ಟೆಂಡರ್ ಮಂಜೂರು ಮಾಡಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜಾಮೀನು ನೀಡಿರುವುದನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲು ಕರ್ನಾಟಕ ಲೋಕಾಯುಕ್ತ ಪೊಲೀಸರು ಚಿಂತನೆ ನಡೆಸಿದ್ದಾರೆ. ಈ ಕುರಿತು ತನಿಖಾಧಿಕಾರಿಗಳು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರೊಂದಿಗೆ ಸಭೆ ನಡೆಸಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಸಿದ್ಧತೆ ಆರಂಭಿಸಿದ್ದಾರೆ ಎಂದು ಮೂಲಗಳು ಬಹಿರಂಗಪಡಿಸಿವೆ. ರುದ್ರಪ್ರಯಾಗ, ತೆಹ್ರಿಗಳಲ್ಲಿ ಹೆಚ್ಚು ಭೂ ಕುಸಿತ ಸಂಭವಿಸಲಿವೆಯಂತೆ ಮಾರ್ಚ್ 17ರಂದು ಕರ್ನಾಟಕ ಹೈಕೋರ್ಟ್ ಮುಂದೆ ಈ ವಿಷಯ ಬರಲಿದ್ದು, ಜಾಮೀನು […]
ಮಾಡಾಳ್ ವಿರುದ್ಧ ಕ್ರಮಕ್ಕೆ ಬಿಜೆಪಿ ಮೀನಾಮೇಷ

ಬೆಂಗಳೂರು,ಮಾ.9- ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆ ಎದುರಿಸುತ್ತಿರುವ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಬಗ್ಗೆ ಪಕ್ಷದ ಹೈಕಮಾಂಡ್ ಕಾದುನೋಡುವ ತಂತ್ರ ಅನುಸರಿಸಿದೆ. ಶಾಸಕ ಮಾಡಾಳ್ ವಿರುಪಾಕ್ಷಪ್ಪ ಅವರ ಪುತ್ರರಾದ ಕೆಎಎಸ್ ಅಧಿಕಾರಿ ಮಾಡಾಳ್ ಪ್ರಶಾಂತ್ ಅವರನ್ನು ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ಪ್ರಕರಣದಲ್ಲಿ ಖೆಡ್ಡಾಗೆ ಕೆಡವಿದ ಘಟನೆ ಕುರಿತು ರಾಜ್ಯ ಬಿಜೆಪಿ ಪಕ್ಷ ಮತ್ತು ಮುಖ್ಯಮಂತ್ರಿಗಳಿಂದ ಹೈಕಮಾಂಡ್ ಮಾಹಿತಿ ಪಡೆದುಕೊಂಡಿದೆ. ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಶಾಸಕರಾಗಿರುವ ವಿರೂಪಾಕ್ಷಪ್ಪ ಅವರ ವಿರುದ್ಧ […]
ಜಾಮೀನು ಸಿಕ್ಕ ಬೆನ್ನಲ್ಲೇ ಮಾಡಾಳ್ ಪ್ರತ್ಯಕ್ಷ, ಅಭಿಮಾನಿಗಳಿದ ಹೂಹಾರ, ಜೈಕಾರ

ಚನ್ನಗಿರಿ,ಮಾ.7- ನಾನು ಯಾವುದೇ ಅಕ್ರಮ ಹಣ ಸಂಪಾದಿಸಿಲ್ಲ. ನನ್ನ ಮನೆಯಲ್ಲಿ ಸಿಕ್ಕ ಹಣ ಕ್ರಷರ್ ಉದ್ಯಮದಿಂದ ಹಾಗೂ ಅಡಿಕೆ ಮಾರಿ ಬಂದ ಆದಾಯವಾಗಿದ್ದು, ಅದಕ್ಕೆ ಸೂಕ್ತ ದಾಖಲೆ ಇದೆ. ಅದನ್ನು ಸಲ್ಲಿಸುತ್ತೇನೆ. ಲಂಚ ಪ್ರಕರಣದಲ್ಲಿ ನಾನು ಸಂಪೂರ್ಣ ನಿರ್ದೋಷಿ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಪುತ್ರ ಪ್ರಶಾಂತ್ ಮಾಡಾಳ್ ಅವರ ಕಚೇರಿ ಮೇಲೆ ನಡೆದ ದಾಳಿ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ಸುಮಾರು 2 ಕೋಟಿ ಹಣ ವಶಪಡಿಸಿಕೊಂಡಿದ್ದರು. ಇದೇ ವೇಳೆ ಸದಾಶಿವನಗರದಲ್ಲಿರುವ ಅವರ ನಿವಾಸದ […]
ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬಿಗ್ ರಿಲೀಫ್, ಜಾಮೀನು ಮಂಜೂರು

ಬೆಂಗಳೂರು,ಮಾ.7- ರಾಸಾಯನಿಕ ವಸ್ತುಗಳನ್ನು ಪೂರೈಕೆ ಮಾಡಲು ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆ ಇಟ್ಟು ಬಂಧನದ ಭೀತಿ ಎದುರಿಸುತ್ತಿದ್ದ ಆಡಳಿತಾರೂಢ ಬಿಜೆಪಿ ಪಕ್ಷದ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯದ ಈ ತೀರ್ಪಿನಿಂದಾಗಿಮಾಡಾಳ್ ವಿರೂಪಾಕ್ಷಪ್ಪ ಸದ್ಯಕ್ಕೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.ಲೋಕಾಯುಕ್ತ ಪೊಲೀಸರು ಬಂಧಿಸಬಹುದು ಎಂಬ ಹಿನ್ನಲೆಯಲ್ಲಿ ವಿರೂಪಾಕ್ಷಪ್ಪ ಹೈಕೋರ್ಟ್ ಏಕಸದಸ್ಯ ಪೀಠದ ಮುಂದೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಏಕಸದಸ್ಯ ಪೀಠದ ನ್ಯಾಯಾೀಧಿಶ ಕೆ.ನಟರಾಜನ್, ಮಾಡಾಳ್ ಅವರಿಗೆ 5 ಲಕ್ಷ ಭದ್ರತಾ […]
ಮಾಡಾಳ್ ಮಿಸ್ಸಿಂಗ್ : ಹುಡುಕಿಕೊಡುವಂತೆ ಕಾಂಗ್ರೆಸ್ ಪೋಸ್ಟರ್ ಪಾಲಿಟಿಕ್ಸ್

ಬೆಂಗಳೂರು,ಮಾ.7-ಕೆಎಸ್ಡಿಎಲ್ ಲಂಚ ಪ್ರಕರಣದಲ್ಲಿ ಮೊದಲನೆ ಆರೋಪಿಯಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಇದುವರೆಗೂ ನಾಪತ್ತೆಯಾಗಿರುವುದರಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪೋಸ್ಟರ್ ಪಾಲಿಟಿಕ್ಸ್ಗೆ ಮುಂದಾಗಿದ್ದಾರೆ. ವಿರೂಪಾಕ್ಷಪ್ಪ ಅವರ ವಿರುದ್ಧ ಎಫ್ಐಆರ್ ದಾಖಲಾಗಿದ್ದರೂ ಅವರು ಇದುವರೆಗೂ ಪೋಲೀಸರಿಂದ ಬಂಧಿಸಲು ಸಾಧ್ಯವಾಗಿಲ್ಲ ಏಕೆ ಎಂದು ಪ್ರಶ್ನಿಸಿರುವ ಕೈ ಕಾರ್ಯಕರ್ತರು ನಗರದ ಹಲವೆಡೆ ಗೋಡೆಗಳ ಮೇಲೆ ಮಾಡಾಳ್ ವಿರೂಪಾಕ್ಷಪ್ಪ ಇರುವ ಪೋಸ್ಟರ್ ಅಂಟಿಸಿ ಅವರನ್ನು ಹುಡುಕಿಕೊಡಿ ಎಂಬ ಅಭಿಯಾನ ಆರಂಭಿಸಿದೆ. ಗೋಡೆ ಹಾರಿ ನೆರೆಮನೆಯಲ್ಲಿ ತಲೆಮರೆಸಿಕೊಂಡಿದ್ದ ಇಮ್ರಾನ್ ಖಾನ್ ಮಾಡಾಳ್ ವಿರೂಪಾಕ್ಷಪ್ಪ ಕಾಣೆಯಾಗಿದ್ದಾರೆ. […]
ನಾಳೆಯೊಳಗೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ : ಬಿಎಸ್ವೈ ಹೇಳಿಕೆ

ಕಲಬುರಗಿ,ಮಾ.6-ಯಾವುದೇ ಕ್ಷಣದಲ್ಲೂ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ತನಿಖಾ ತಂಡ ಬಂಧಿಸಬಹುದೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಜೇವರ್ಗಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗಿರುವ ಮಾಹಿತಿಯಂತೆ ನಾಳೆಯೊಳಗೆ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಬಹುದು. ಕಾನೂನಿಗೆ ಪ್ರತಿಯೊಬ್ಬರು ತಲೆಬಾಗುವುದು ಅನಿವಾರ್ಯ ಎಂದು ಸೂಚ್ಯವಾಗಿ ಹೇಳಿದರು. ಈ ಪ್ರಕರಣದಲ್ಲಿ ನಮ್ಮ ಪಕ್ಷ ಯಾರನ್ನೂ ಕೂಡ ರಕ್ಷಣೆ ಮಾಡುವುದಿಲ್ಲ. ಕಾನೂನು ಪ್ರಕಾರ ಏನು ಶಿಕ್ಷೆಯಾಗಬೇಕೋ ಅದು ಆಗಲಿದೆ. ಲೋಕಾಯುಕ್ತ ವಿಷಯದಲ್ಲಿ ಯಾರೊಬ್ಬರು ಹಸ್ತಕ್ಷೇಪ […]
ಮಾಡಾಳ್ ವಿರೂಪಾಕ್ಷಪ್ಪ ವಿಚಾರಣೆಗೆ ಲೋಕಾಯುಕ್ತ ಪೊಲೀಸರ ಸಿದ್ಧತೆ

ಬೆಂಗಳೂರು,ಮಾ.4- ಕೆಎಸ್ಡಿಎಲ್ ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ವಿಚಾರಣೆಗೊಳಪಡಿಸಲು ಲೋಕಾಯುಕ್ತ ಸಂಸ್ಥೆ ತೀರ್ಮಾನಿಸಿದೆ. ಬೆಂಗಳೂರು ನೀರು ಸರಬರಾಜು ಮಂಡಳಿಯಲ್ಲಿ ಲೆಕ್ಕಾಧಿಕಾರಿಯಾಗಿರುವ ಪುತ್ರ ಪ್ರಶಾಂತ್ ಮಾಡಾಳ್ ಅವರು ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬೀಳುತ್ತಿದ್ದಂತೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ನಾಪತ್ತೆಯಾಗಿದ್ದಾರೆ. ಪ್ರಶಾಂತ್ ಸಿಕ್ಕಿ ಬಿದ್ದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ನಗರದಲ್ಲಿ ವಿರೂಪಾಕ್ಷಪ್ಪ ಅವರ ನಿವಾಸ ಹಾಗೂ ಚನ್ನಗಿರಿಯ ನಿವಾಸಗಳ ಮೇಲೂ ದಾಳಿ ನಡೆಸಿ 8.28 ಕೋಟಿ ರೂ.ಗಳಿಗೂ ಹೆಚ್ಚು […]
ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು,ಮಾ.4- ಕೆಎಸ್ಡಿಎಲ್ ಟೆಂಡರ್ ಲಂಚ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು, ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದೆ. ರೇಸ್ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ,ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ಸಿಂಗ್ ಸುರ್ಜೇವಾಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲಿಂ ಅಹ್ಮದ್, […]
ಬಿಜೆಪಿ ಶಾಸಕನ ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ, ಸಿಎಂ ಪ್ರತಿಕ್ರಿಯೆ ಏನು..?

ಬೆಂಗಳೂರು, ಮಾ.3- ಯಾರೇ ತಪ್ಪು ಮಾಡಿದ್ದರೂ ಕಾನೂನಿನ ಪ್ರಕಾರವೇ ಶಿಕ್ಷೆಯಾಗಲಿದೆ. ಲೋಕಾಯುಕ್ತ ಸರ್ವ ಸ್ವತಂತ್ರವಾಗಿ ಕೆಲಸ ಮಾಡಲಿ. ನಾವು ಯಾರನ್ನೂ ಕೂಡ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗುವಂತೆ ತನಿಖೆಯಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಕಚೇರಿ ಮತ್ತು ನಿವಾಸದ ಮೇಲೆ ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ನಗದು ಸಿಕ್ಕಿರುವ ಪ್ರಕರಣಕ್ಕೆ ಸಂಬಂಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ನಾವು ಲೋಕಾಯುಕ್ತ ಪುನರ್ […]