ಮಾಡಾಳು ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿಯ ಮೇಲ್ಮನಿ ವಿಚಾರಣೆಗೆ ಸುಪ್ರೀಂ ಸಮ್ಮತಿ

ನವದೆಹಲಿ,ಮಾ.14- ಕೆಎಸ್‍ಡಿಎಲ್ ಹಗರಣದಲ್ಲಿ ಅಚ್ಚರಿಯ ರೀತಿಯಲ್ಲಿ ಜಾಮೀನು ಪಡೆದು ಬಂಧನದಿಂದ ಪಾರಾಗಿದ್ದ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ (ಕೆಎಸ್‍ಡಿಎಲ್) ಗುತ್ತಿಗೆ ಹಗರಣದ ಪ್ರಮುಖ ಆರೋಪಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಲೋಕಾಯುಕ್ತ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿಸಿದೆ. ಇಂದು ನಡೆದ ಕಲಾಪದ ಆರಂಭದಲ್ಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ […]

ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪಗೆ ಲುಕ್‍ಔಟ್ ನೋಟಿಸ್

ಬೆಂಗಳೂರು, ಮಾ.5- ಬಂಧನದ ಭೀತಿಯಿಂದ ತಲೆಮರೆಸಿಕೊಂಡಿರುವ ದಾವಣಗೆರೆ ಜಿಲ್ಲೆ, ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಲೋಕಾಯುಕ್ತ ಪೊಲೀಸರು ಲುಕ್‍ಔಟ್ನೋಟಿಸ್ ಜಾರಿಗೊಳಿಸಲು ಸಜ್ಜಾಗಿದ್ದಾರೆ. ಪ್ರಕರಣದ ಯಾವೊಬ್ಬ ಆರೋಪಿಗೆ ಲುಕ್‍ಔಟ್ ನೋಟಿಸ್ ಜಾರಿಮಾಡಿದರೆ ಆತ ವಿದೇಶಕ್ಕೆ ತೆರಳುವಂತಿಲ್ಲ. ಕಡ್ಡಾಯವಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ಹೋಗಬೇಕಾಗುತ್ತದೆ. ವಿಮಾನ ನಿಲ್ದಾಣ, ಬಂದರು ಸೇರಿದಂತೆ ದೇಶದೆಲ್ಲೆಡೆ ಈ ಲುಕ್‍ಔಟ್ ನೋಟಿಸ್ ಜಾರಿಗೊಳಿ ಸಲಾಗುತ್ತದೆ. ಒಂದು ವೇಳೆ ಮಾಹಿತಿ ನೀಡದೆ ಸಂಬಂಧಿತ ಆರೋಪಿ ವಿದೇಶಕ್ಕೆ ಇಲ್ಲವೆ ಹೊರರಾಜ್ಯಗಳಿಗೆ ತೆರಳಲು […]