ಮಧುಗಿರಿಯಲ್ಲಿ ಭಾರೀ ಮಳೆಗೆ ಮನೆ ಕುಸಿದು ವೃದ್ಧೆ ಸಾವು, ಕೊಚ್ಚಿಹೋದ ಕಾರು

ತುಮಕೂರು, ಅ.14- ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಭಾರೀಮಳೆಗೆ ಅಲ್ಲಲ್ಲಿ ಹಾನಿಯಾಗಿದ್ದು, ಮಧುಗಿರಿ ತಾಲ್ಲೂಕಿನ ತುಂಗೋಟಿ ಗ್ರಾಮದಲ್ಲಿ ಮನೆ ಚಾವಣಿ ಕುಸಿದು ಚೌಡಮ್ಮ (70)ಎಂಬುವವರು ಮೃತಪಟ್ಟಿದ್ದಾರೆ.ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ದಾಸಲುಕುಂಟೆ ಗ್ರಾಮದ ಕೆರೆ ಭಾರೀ ಮಳೆಯಿಂದ ಸುಮಾರು 18 ವರ್ಷಗಳ ನಂತರ ಕೋಡಿ ಬಿದ್ದಿದೆ. ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ, ಕೋಡಿ ನೀರು ಬಹು ದೊಡ್ಡ ಪ್ರಮಾಣದಲ್ಲಿ ಹರಿದು ಬರುತ್ತಿದೆ.ಇದನ್ನು ಗಮನಿಸದ ಕಾರು ಚಾಲಕ ಬುಧವಾರ ರಾತ್ರಿ ತುಮಕೂರು ಮಾರ್ಗವಾಗಿ ತೋವಿನಕೆರೆ ಬರುತ್ತಿದ್ದು, ಈ […]

ಅರುಂಧತಿ ಸಿನಿಮಾ ಹುಚ್ಚು : ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

ತುಮಕೂರು, ಆ.11- ತೆಲುಗಿನ ಅರುಂಧತಿ ಸಿನಿಮಾದ ಗೀಳು ಅಂಟಿಸಿಕೊಂಡ ಯುವಕ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿರುವ ಘಟನೆ ಮಧುಗಿರಿ ತಾಲೂಕಿನ ಗಿಡ್ಡನಪಾಳ್ಯದಲ್ಲಿ ನಡೆದಿದೆ. ಗಿಡ್ಡನಪಾಳ್ಯದ ರೇಣುಕಯ್ಯ ಬೆಂಕಿ ಹಚ್ಚಿಕೊಂಡ ಯುವಕ. ಎಸ್‍ಎಸ್‍ಎಲ್‍ಸಿಯಲ್ಲಿ ಉತ್ತಮ ಅಂಕಗಳನ್ನು ಪಡೆದಿದ್ದ ಈತನನ್ನು ತುಮಕೂರಿನ ಕಾಲೇಜಿಗೆ ಸೇರಿಸಲಾಗಿತ್ತು. ನಂತರ ಹಾಸ್ಟೆಲ್ ವಿದ್ಯಾರ್ಥಿಗಳೊಂದಿಗೆ ಸಿನಿಮಾ ಗೀಳು ಅಂಟಿಸಿಕೊಂಡಿದ್ದ ಎನ್ನಲಾಗಿದೆ. ತೆಲುಗಿನಲ್ಲಿ ತೆರೆಕಂಡಿದ್ದ ಅರುಂಧತಿ ಸಿನಿಮಾದಿಂದ ಪ್ರಭಾವಿತಗೊಂಡಿದ್ದ ಈತ ಪದೇ ಪದೇ ಈ ಸಿನಿಮಾ ವೀಕ್ಷಣೆ ಮಾಡುತ್ತಿದ್ದ ಎನ್ನಲಾಗಿದ್ದು, ವಿದ್ಯಾಭ್ಯಾಸ ಬಿಟ್ಟು ಮನೆಗೂ ಬರದೆ ತುಮಕೂರಿನಲ್ಲಿ […]