ನಿಷೇಧಾಜ್ಞೆ ಜಾರಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಡಿಕೇರಿ ಚಲೋ ರದ್ದು

ಬೆಂಗಳೂರು, ಆ.23- ಕೊಡಗಿನಲ್ಲಿ ಮೂರು ದಿನಗಳ ನಿಷೇಧಾಜ್ಞೆ ವಿಧಿಸಿರುವುದರಿಂದ ಆ.26ರಂದು ಆಯೋಜಿಸಿದ್ದ ಮಡಿಕೇರಿ ಚಲೋ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂದು ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ಆದೇಶ ಎಂದರೆ ಸರ್ಕಾರದ ಆದೇಶ. ಜವಾಬ್ದಾರಿಯುತ ಪ್ರತಿಪಕ್ಷವಾಗಿ ನಾವು ಸರ್ಕಾರದ ಆದೇಶ ಪರಿಪಾಲಿಸುತ್ತೇವೆ. ಕೊಡಗು ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆ ಮುಂದೂಡಲು ನಿರ್ಧರಿಸಿದ್ದೇವೆ ಎಂದರು. ಆಗಸ್ಟ್18ರಂದು ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆದ ಹಾನಿಯನ್ನು ಪರಿಶೀಲಿಸಲು ತೆರಳಿದ್ದೆ. ವಾಡಿಕೆಗಿಂತಲೂ ಎರಡು-ಮೂರು ಪಟ್ಟು ಹೆಚ್ಚು ಮಳೆ […]