ತ್ರಿವೇಣಿ ಸಂಗಮ ಮಹಾಕುಂಭಮೇಳಕ್ಕೆ ಯುಪಿ ಸಿಎಂ
ಯೋಗಿಗೆ ಆಹ್ವಾನ

ಮಂಡ್ಯ, ಸೆ.16- ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾ ಕುಂಭಮೇಳಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಗಮಿಸಲಿದ್ದಾರೆ ಎಂದು ಕ್ರೀಡಾ ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ.ಲಖನೌನಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ ಸಚಿವ ಡಾ.ನಾರಾಯಣಗೌಡ ಅವರು ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಆಹ್ವಾನ ನೀಡಿದರು. ಅ.13 ರಿಂದ 16ರ ವರೆಗೂ ಕೆಆರ್ ಪೇಟೆಯ ಲಕ್ಷ್ಮಣತೀರ್ಥ-ಹೇಮಾವತಿ-ಕಾವೇರಿ ನದಿಯ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳ ನಡೆಯಲಿದೆ. ಈ ಮಹಾಕುಂಭ ಮೇಳದಲ್ಲಿ ಅ.16ರಂದು ಪಾಲ್ಗೊಳ್ಳುವುದಾಗಿ ಯೋಗಿ […]