ಚಾಮುಂಡಿ ಬೆಟ್ಟದಲ್ಲಿ ಜರುಗಿದ ಅದ್ಧೂರಿ ರಥೋತ್ಸವ

ಮೈಸೂರು,ಅ.9- ಚಾಮುಂಡಿ ಬೆಟ್ಟದಲ್ಲಿ ಮಹಾರಥೋತ್ಸವ ಇಂದು ವಿಜೃಂಭಣೆಯಿಂದ ನೆರವೇರಿತು.ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ರಥೋತ್ಸವಕ್ಕೆ ಚಾಲನೆ ನೀಡಿದರು.ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡರು. ಬೆಳಗ್ಗೆ 7.50ರಿಂದ 8.10ರೊಳಗೆ ಸಲ್ಲುವ ಶುಭ ಲಗ್ನದಲ್ಲಿ ಶ್ರೀ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನವರಾತ್ರಿ ಮುಗಿದ ಮೊದಲ ಹುಣ್ಣಿಮೆಯಲ್ಲಿ ಚಾಮುಂಡಿ ತಾಯಿಯ ರಥೋತ್ಸವವನ್ನು ನಡೆಸಲಾಗುತ್ತದೆ. ವಿವಿಧ ಜಾನಪದ ಕಲಾತಂಡಗಳು ಚಾಮುಂಡೇಶ್ವರಿ ರಥೋತ್ಸವದಲ್ಲಿ ಪಾಲ್ಗೊಂಡು ಮೆರಗು ನೀಡಿದವು. ಸಿಎಆರ್ ಸಿಬ್ಬಂದಿ ಕುಶಾಲ್‍ತೋಪು ಸಿಡಿಸಿ ಗೌರವ ಸಲ್ಲಿಸಿದರು.