ಹೊರರಾಜ್ಯದಿಂದ ಬರುವ ಪ್ರಯಾಣಿಕರಿಗೆ RT-PCR ಟೆಸ್ಟ್ ಕಡ್ಡಾಯ
ಬೆಂಗಳೂರು, ಜ.6- ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ಕೇರಳ, ಮಹಾರಾಷ್ಟ್ರ, ಗೋವಾದಿಂದ ಬರುವ ಪ್ರಯಾಣಿಕರಿಗೆ ಆರ್ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಹೊಂದಿರುವುದನ್ನು ಕೆಎಸ್ಆರ್ಟಿಸಿ ಕಡ್ಡಾಯ ಮಾಡಿದೆ. ಕೋವಿಡ್ ಲಸಿಕೆ ಎರಡು ಡೋಸ್ಗಳನ್ನು ಪಡೆದಿರಲಿ ಅಥವಾ ಪಡೆಯದಿರಲಿ ಪ್ರಯಾಣಿಕರು 72 ಗಂಟೆಯೊಳಗೆ ಮಾಡಿಸಿರುವ ಆರ್ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ್ ತಿಳಿಸಿದ್ದಾರೆ. ಈ ಬಗ್ಗೆ ಚಾಲನಾ ಸಿಬ್ಬಂದಿಗಳಿಗೆ ಸೂಕ್ತ ತಿಳುವಳಿಕೆ ನೀಡಿ ಕ್ರಮ ಕೈಗೊಳ್ಳಲು ಅೀನ ಅಕಾರಿಗಳಿಗೆ […]