ಮಹಾರಾಷ್ಟ್ರ ಬ್ಯಾಂಕ್ ಮುತ್ತಿಗೆಗೆ ಯತ್ನಿಸಿದ ಕನ್ನಡಪರ ಹೋರಾಟಗಾರರು

ಬೆಂಗಳೂರು,ಡಿ.9- ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲಿನ ದೌರ್ಜನ್ಯ ಪ್ರಕರಣ ಖಂಡಿಸಿ ಮಹಾಬ್ಯಾಂಕ್‍ಗೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡಪರ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಎಂಇಎಸ್ ಪುಂಡರು ಕನ್ನಡಿಗರ ಮೇಲೆ ನಡೆಸುತ್ತಿರುವ ದಬ್ಬಾಳಿಕೆ ವಿರೋಧಿಸಿ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು ಗಾಂಧಿನಗರದಲ್ಲಿರುವ ಬ್ಯಾಂಕ್ ಆಫ್ ಮಹಾರಾಷ್ಟ್ರಗೆ ಮುತ್ತಿಗೆ ಹಾಕಲು ಯತ್ನಿಸಿದರು. ವಿಷಯ ತಿಳಿಯುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಬ್ಯಾಂಕ್‍ಗೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರು. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಬ್ಯಾಂಕ್‍ಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು […]