ಕರ್ನಾಟಕ ಉದ್ಯೋಗ ನೀತಿ 2022-25ಕ್ಕೆ ಸಚಿವ ಸಂಪುಟ ಒಪ್ಪಿಗೆ, ಕಸಾಪ ಸ್ವಾಗತ

ಬೆಂಗಳೂರು, ಜು.27- ಕನ್ನಡಿಗರಿಗೇ ಹೆಚ್ಚಿನ ಉದ್ಯೋಗ ದಕ್ಕಿಸಲು ಕರ್ನಾಟಕ ಉದ್ಯೋಗ ನೀತಿ 2022-25ಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿರುವ ಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು ಸ್ವಾಗತಿಸಿದೆ. ಖಾಸಗಿ ವಲಯಗಳಲ್ಲೂ ಕನ್ನಡಿಗರಿಗೆ ಕೆಲಸದ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕನ್ನಡಿಗರ ಬಹುದಿನದ ಬೇಡಿಕೆಗೆ ಸರಕಾರ ಸ್ಪಂದಿಸಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಷಿ ಹೇಳಿದ್ದಾರೆ. ನಮ್ಮ ನಾಡಿನಲ್ಲಿ ನಮ್ಮವರೇ ನಿರುದ್ಯೋಗದ ಪಿಡುಗಿನಲ್ಲಿ ಸಿಲುಕಿಕೊಂಡಿದ್ದಾರೆ. ಸರ್ಕಾರ ಖಾಸಗಿ ಕ್ಷೇತ್ರದಲ್ಲಿ […]