ಆದಿಚುಂಚನಗಿರಿಯಲ್ಲಿ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಬೆಂಗಳೂರು,ಫೆ.28-ಇತಿಹಾಸ ಪ್ರಸಿದ್ದ ಆದಿಚುಂಚನಗಿರಿ ಶ್ರೀಕ್ಷೇತ್ರದಲ್ಲಿ ಇಂದಿನಿಂದ ಮಾ.8ರವರೆಗೆ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದ್ದು, ನಾಡಿನ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದಾರೆ. ಇಂದು ಬೆಳಗ್ಗೆ 8 ಗಂಟೆಗೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಗಂಗಾಧರೇಶ್ವರ ಸ್ವಾಮಿ ದೇವಾಲಯದಲ್ಲಿ ಮಹಾಪೂಜೆ, ಧ್ವಜ ಪೂಜೆ ಮೂಲಕ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಬಳಿಕ 10 ಗಂಟೆಗೆ ಸಾವಿರಾರು ಭಕ್ತರ ಹರ್ಷೋದ್ಘಾರ ಜೈಕಾರದ ನಡುವೆ ಶ್ರೀ ಕ್ಷೇತ್ರದಲ್ಲಿ ನಂದಿಪೂಜೆ ಸಲ್ಲಿಸಿ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. […]

ನಾಳೆಯಿಂದ ಆದಿಚುಂಚನಗಿರಿಯಲ್ಲಿ ಜಾತ್ರೋತ್ಸವ

ನಾಗಮಂಗಲ,ಫೆ.27- ಆಧ್ಯಾತ್ಮಿಕ ಕ್ಷೇತ್ರ ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ನಾಳೆಯಿಂದ ಮಾ.8ರವರೆಗೆ ಜಾತ್ರೋತ್ಸವ ನಡೆಯಲಿದೆ. ನಾಳೆ ಬೆಳಗ್ಗೆ 6 ಗಂಟೆಗೆ ಶ್ರೀಗಂಗಾಧರೇಶ್ವರ ದೇವಾಲಯದಲ್ಲಿ ಪೂಜೆ, ಧಾರ್ಮಿಕ ಕೈಂಕರ್ಯಗಳು ನಡೆದ ನಂತರ 8 ಗಂಟೆಗೆ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಧ್ವಜಾರೋಹಣ ಮಾಡುವುದರ ಮೂಲಕ ಜಾತ್ರೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಮಾ. 1ರಂದು ಮಧ್ಯಾಹ್ನ ಕಬಡಿ ಪಂದ್ಯಾವಳಿ ನಡೆಯಲಿದ್ದು, ಸಂಜೆ 6 ಗಂಟೆಗೆ ಸರ್ವಾಲಂಕೃತ ಚಂದ್ರಮೌಳೇಶ್ವರ ಸ್ವಾಮೀಜಿ ಉತ್ಸವ ನಡೆಯಲಿದ್ದು, ಮಾ. 2ರಂದು ಮಧ್ಯಾಹ್ನ 3 ಗಂಟೆಗೆ ಮಲ್ಲೇಶ್ವರ ಸ್ವಾಮಿ […]

ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆಗೆ ಹರಿದು ಬಂದ ಭಕ್ತ ಸಾಗರ

ತುಮಕೂರು, ಜ.21- ಲೋಕಕಲ್ಯಾಣಕ್ಕಾಗಿ ದಣಿವರಿಯದೆ ತಮ್ಮ ಬದುಕನ್ನೇ ಮುಡುಪಾಗಿಟ್ಟು ಸಿದ್ಧಗಂಗೆಯನ್ನು ಅಕ್ಷರಶಃ ಶಿಕ್ಷಣ ಕಾಶಿಯನ್ನಾಗಿಸಿ ವಿಶ್ವವಿಖ್ಯಾತಗೊಳಿಸಿದ ತ್ರಿವಿಧ ದಾಸೋಹಿ, ಕಾಯಕ ಯೋಗಿ, ನಡೆದಾಡುವ ದೇವರು ಎಂದೇ ನಾಡಿನ ಉದ್ದಗಲಕ್ಕೂ ಪ್ರಸಿದ್ಧರಾಗಿದ್ದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 4ನೆ ಪುಣ್ಯ ಸ್ಮರಣೆಯನ್ನು ಸಿದ್ಧಗಂಗೆಯಲ್ಲಿಂದು ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಆಚರಿಸಲಾಯಿತು. ಗದ್ದುಗೆಯು ವಿವಿಧ ಬಗೆಯ ಹೂವು-ಹಣ್ಣು ಹಾಗೂ ಕಬ್ಬಿನಿಂದ ಅಲಂಕೃತಗೊಂಡು ಕಂಗೊಳಿಸುತ್ತಿತ್ತು. ಮುಂಜಾನೆಯೇ ಇಷ್ಟಲಿಂಗ ಪೂಜೆ ನೆರವೇರಿಸಿದ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ನೇತೃತ್ವದಲ್ಲಿ ಲಿಂಗೈಕ್ಯ […]

ಹಾಸನಾಂಬೆಯ ಆಭರಣ ಖಜಾನೆಯಿಂದ ದೇಗುಲಕ್ಕೆ ಹಸ್ತಾಂತರ

ಹಾಸನ,ಅ.11- ಜಿಲ್ಲೆಯ ಅಧಿ ದೇವತೆ ಹಾಸನಾಂಬ ಜಾತ್ರಾ ಮಹೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ದೇವಿಯ ಆಭರಣಗಳನ್ನು ಸಾಲಗಾಮೆ ರಸ್ತೆಯ ಜಿಲ್ಲಾ ಖಜಾನೆಯಿಂದ ಪಲ್ಲಕ್ಕಿಯಲ್ಲಿ ಇರಿಸಿ ಬೆಳ್ಳಿ ರಥದಲ್ಲಿ ದೇವಸ್ಥಾನಕ್ಕೆ ಕೊಂಡೊಯ್ಯಲಾಯಿತು. ತಹಶೀಲ್ದಾರ್ ನಟೇಶ್ ಸಮ್ಮುಖದಲ್ಲಿ ಖಜಾನೆಯಿಂದ ಒಡವೆ ಪೆಟ್ಟಿಗೆಗಳನ್ನು ಹೊರ ತಂದು ಪುಷ್ಪಾಲಂಕೃತ ಅಡ್ಡ ಪಲ್ಲಕ್ಕಿ ಮೇಲೆ ಇಟ್ಟು ಪೂಜೆ ಸಲ್ಲಿಸಲಾಯಿತು. ಸಂಪ್ರದಾಯಂತೆ ಮಡಿವಾಳರು ಪಂಜು ಮತ್ತು ಮಹಿಳೆಯರು ಆರತಿ ಬೆಳಗಿದರು. ಭಕ್ತರು ಹಾಸನಾಂಬೆಗೆ ಜೈಕಾರ ಹಾಕಿದರು. ಬಿಗಿ ಪೊಲೀಸ್ ಬಂದೋ ಬಸ್‍ನಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಮಂಗಳ […]

ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ

ಮೈಸೂರು,ಜು.20- ನಗರದ ಚಾಮುಂಡಿ ಬೆಟ್ಟದಲ್ಲಿ ನೆಲೆ ನಿಂತಿರುವ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ಇಂದು ವರ್ಧಂತಿ ಮಹೋತ್ಸವ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಗಳು ನಡೆಯುತ್ತಿವೆ. ದೇವಿಗೆ ಮಹಾನ್ಯಾಸ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಸಹಸ್ರನಾಮಾರ್ಚನೆ ಮತ್ತು ಇತರ ಪೂಜಾ ಕೈಂಕರ್ಯಗಳು ನಡೆದಿವೆ. ಆಷಾಢ ಮಾಸದ ಕೃಷ್ಣಪಕ್ಷದ ಸಪ್ತಮಿ ರೇವತಿ ನಕ್ಷತ್ರದಂದು ವರ್ಧಂತಿ ಇರುವುದರಿಂದ ಇಂದು ಬಹಳ ವಿಶೇಷವಾಗಿತ್ತು. ಸಂಪ್ರದಾಯದಂತೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ನಾಡ ಅದೇವತೆಗೆ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಗಿದೆ. ರಾಜವಂಶಸ್ಥ […]

ಜು.19ರಂದು ಮೇಲುಕೋಟೆ ಚೆಲುವನಾರಾಯಣಸ್ವಾಮಿ ರಾಜಮುಡಿ ಉತ್ಸವ

ಮೇಲುಕೋಟೆ, ಜು.11- ಚೆಲುವನಾರಾಯಣಸ್ವಾಮಿಯ ಶ್ರೀಕೃಷ್ಣ ರಾಜಮುಡಿ ಉತ್ಸವ ಜುಲೈ 19ರಂದು ನಡೆಯಲಿದ್ದು, ಈ ಸಂಬಂಧದ ಧಾರ್ಮಿಕ ಕೈಂಕರ್ಯಗಳು ಜು.14ರ ಅಂಕುರಾರ್ಪಣೆಯೊಂದಿಗೆ ಆರಂಭವಾಗಲಿದೆ. ಮೈಸೂರು ದೊರೆ ಮುಮ್ಮಡಿ ಶ್ರೀಕೃಷ್ಣರಾಜ ಒಡೆಯರ್ ಆಷಾಢಮಾಸದಲ್ಲಿ ಬ್ರಹ್ಮೋತ್ಸವ ಆರಂಭಿಸಿ ಉತ್ಸವದ ನಾಲ್ಕನೇ ದಿನವಾದ ಗರುಡೋತ್ಸವಕ್ಕೆ ವಜ್ರ ಖಚಿತ ಕೃಷ್ಣರಾಜಮುಡಿ ಕಿರೀಟ ಮತ್ತು ರಾಜಲಾಂಛನ ಗಂಡುಬೇರುಂಡ ಪದಕವನ್ನು ಕೊಡುಗೆಯಾಗಿ ನೀಡಿದ್ದರು. ಬ್ರಹ್ಮೋತ್ಸವದ ನೆನಪಿಗಾಗಿ ಕಲ್ಯಾಣಿ ಸಮುಚ್ಚಯದಲ್ಲಿ ಭುವನೇಶ್ವರಿ ಮಂಟಪವನ್ನೂ ನಿರ್ಮಿಸಿದ್ದಾರೆ. ಕೃಷ್ಣರಾಜಮುಡಿ ಉತ್ಸವದಂದು ರಾತ್ರಿ 7 ಗಂಟೆಗೆ ಶ್ರೀದೇವಿ ಭೂದೇವಿ ಸಮೇತನಾಗಿ ಗರುಡಾರೂಢನಾದ ಚೆಲುವನಾರಾಯಣಸ್ವಾಮಿಗೆ […]