ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಸಿದ್ಧತೆ

ಬೆಂಗಳೂರು, ಜ.23- ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜಾಗದ ಮಾಲೀಕತ್ವದಲ್ಲಿ ತೀವ್ರ ವಿವಾದಕ್ಕೆ ಗುರಿಯಾಗಿದ್ದ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಈ ಬಾರಿ ಅದ್ದೂರಿಯಾಗಿ ಗಣರಾಜ್ಯೋತ್ಸವ ಆಚರಣೆಗೆ ಬೆಂಗಳೂರು ನಗರ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಉತ್ತರ ವಿಭಾಗದ ಎಸಿ ಧ್ವಜರೋಹಣ ಮಾಡಲಿದ್ದಾರೆ. ಆಚರಣೆ ಕುರಿತು ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್ ಅವರು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿದ ಕಂದಾಯ ಇಲಾಖೆ ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲು […]

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಓವೈಸಿ ಮನವಿ

ಬೆಂಗಳೂರು,ನ.8-ವಾಣಿಜ್ಯ ರಾಜಧಾನಿ ಹುಬ್ಬಳ್ಳಿಯ ವಿವಾದಾತ್ಮಕ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಅವಕಾಶ ಕಲ್ಪಿಸಿ ಕೊಡಬೇಕೆಂದು ಎಐಎಂಐಎಂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ಅಸಾವುದ್ದೀನ್ ಓವೈಸಿ ಮನವಿ ಮಾಡಿದ್ದಾರೆ. ಈ ಕುರಿತು ಹುಬ್ಬಳ್ಳಿ ಮಹಾನಗರ ಪಾಲಿಕೆಗೆ ಮನವಿ ಮಾಡಿರುವ ಅವರು ನ.10ರಂದು ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಬೇಕೆಂದು ಯೋಜಿಸುತ್ತಿದ್ದೇವೆ. ಕಾನೂನಿನಡಿ ಅವಕಾಶ ನೀಡಬೇಕೆಂದು ಆಯುಕ್ತರಿಗೆ ಪತ್ರದಲ್ಲಿ ಕೋರಿದ್ದಾರೆ. ಓವೈಸಿ ಅವರ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ ಹುಬ್ಬಳ್ಳಿ ಮಹಾನಗರ ಪಾಲಿಕೆ ಆಯುಕ್ತರು, ಸರ್ಕಾರ […]

ಚಾಮರಾಜಪೇಟೆ ಮೈದಾನದಲ್ಲಿ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡಿವಂತೆ ಆಗ್ರಹ

ಬೆಂಗಳೂರು,ಅ.17- ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇರುವ ಚಾಮರಾಜಪೇಟೆ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡಬೇಕೆಂದು ಚಾಮರಾಜಪೇಟೆ ನಾಗರೀಕ ಒಕ್ಕೂಟದ ಅಧ್ಯಕ್ಷ ರಾಮೇಗೌಡ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಾಚರಣೆ ಮಾದರಿಯಲ್ಲೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಬೇಕೆಂದು ಒತ್ತಾಯಿಸಿದರು. ನ್ಯಾಯಾಲಯದ ಆದೇಶದ ಪ್ರಕಾರ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣ ರಾಜ್ಯೋತ್ಸವ ಆಚರಣೆಗೆ ಅನುಮತಿ ಇದೆ. ಹೀಗಾಗಿ ಸರ್ಕಾರ ರಾಜ್ಯೋತ್ಸವ ಆಚರಣೆಗೂ ಅನುಮತಿ ಕೋರಿ ಮೇಲ್ಮನವಿ ಸಲ್ಲಿಸಬೇಕೆಂದು ಆಗ್ರಹಿಸಿದರು. ಈ ಕುರಿತು ಈಗಾಗಲೇ ಕಂದಾಯ ಸಚಿವ ಆರ್. […]

ಚಾಮರಾಜಪೇಟೆ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಪಟ್ಟು

ಬೆಂಗಳೂರು,ಸೆ.27- ಚಾಮರಾಜಪೇಟೆ ಈದ್ಗಾ ಮೈದಾನದ ವಿವಾದ ಇನ್ನು ತಣ್ಣಗಾದಂತೆ ಕಾಣುತ್ತಿಲ್ಲ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಪಟ್ಟು ಹಿಡಿದಿದ್ದ ಹಿಂದೂಪರ ಸಂಘಟನೆಗಳು ಅನುಮತಿ ಸಿಗದ ಕಾರಣ ನಿರಾಸೆಗೊಂಡಿದ್ದರು. ಗಣೇಶೋತ್ಸವದ ಸಂದರ್ಭದಲ್ಲಿ ತಣ್ಣಗಾಗಿದ್ದ ಹಿಂದೂ ಪರ ಸಂಘಟನೆಗಳ ಮುಖಂಡರು ಇದೀಗ ಕನ್ನಡ ರಾಜ್ಯೋತ್ಸವ ಆಚರಣೆಗೆ ಪಟ್ಟು ಹಿಡಿದಿದ್ದಾರೆ. ಇದರಿಂದ ಕಂದಾಯ ಇಲಾಖೆಗೆ ಮತ್ತೊಂದು ಟೆನ್ಷನ್ ಶುರುವಾಗಿದೆ. ಕೇವಲ ಕನ್ನಡ ಪರ ಹಾಗೂ ಹಿಂದೂಪರ ಸಂಘಟನೆಗಳಲ್ಲದೆ ಕನ್ನಡ ಸಾಹಿತ್ಯ ಪರಿಷತ್ ಕೂಡ ಮೈದಾನದಲ್ಲಿ ನಾಡಧ್ವಜ ಹಾರಿಸುವಂತೆ ಒತ್ತಡ ಹಾಕಿದೆ. ಮೈದಾನದಲ್ಲಿ ತ್ರಿವರ್ಣ […]

ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ : ಸಿಎಂಗೆ ಸಿ.ಟಿ.ರವಿ ಪತ್ರ

ಬೆಂಗಳೂರು,ಆ.24- ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕೆಂದು ಕೋರಿ ಶಾಸಕ ಸಿಟಿ ರವಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಗಣೇಶೋತ್ಸವ ಕುರಿತು ಪಕ್ಷದ ಯಾವ ನಾಯಕರೂ ತಮಗೆ ಮನವಿ ಮಾಡಿಲ್ಲ ಎಂದು ಕಂದಾಯ ಸಚಿವ ಅಶೋಕ್ ಹೇಳಿದ್ದರು. ಆದರೆ ಈಗ ಸಿಟಿ ರವಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅನುಮತಿ ನೀಡಬೇಕೆಂದು ಮನವಿ ಮಾಡಿದ್ದಾರೆ. ಚಾಮರಾಜಪೇಟೆಯ ಆಟದ ಮೈದಾನ ಕಂದಾಯ ಇಲಾಖೆಯಡಿಯಲ್ಲಿದ್ದರೂ ಸಿ.ಟಿ.ರವಿ ಕಂದಾಯ ಇಲಾಖೆಗೆ ಪತ್ರ ಬರೆಯದೇ ನೇರವಾಗಿ ಸಿಎಂ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಚಾಮರಾಜಪೇಟೆ […]

ಚಾಮರಾಜಪೇಟೆ ಮೈದಾನದಲ್ಲಿ ಅದ್ಧೂರಿ ಗಣೇಶೋತ್ಸವಕ್ಕೆ ಸಿದ್ಧತೆ

ಬೆಂಗಳೂರು,ಆ.20- ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಬಾರದು ಎಂದು ಪೆÇಲೀಸರು ಗುಪ್ತ ಸೂಚನೆ ನೀಡಿದ್ದರೂ ಈ ಬಾರಿ ಮೈದಾನದಲ್ಲಿ ಅದ್ದೂರಿ ಗಣೇಶೊತ್ಸವಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಇದೇ ಆ.31 ರಿಂದ ಸೆ.10ರವರೆಗೆ ಚಾಮರಾಜಪೇಟೆ ಮೈದಾನದಲ್ಲಿ ಬೆಂಗಳೂರು ಮಹಾನಗರ ಗಣೇಶೋತ್ಸವ ಸಮಿತಿ ಸಹಯೋಗದೊಂದಿಗೆ ಅದ್ಧೂರಿ ಗಣೇಶೋತ್ಸವ ಆಚರಿಸಲಾಗುವುದು ಎಂದು ಚಾಮರಾಜಪೇಟೆ ಗಣೇಶೋತ್ಸವ ಸಮಿತಿ ಘೋಷಿಸಿದೆ. ಈ ಕುರಿತಂತೆ ಈಗಾಗಲೇ ಭರ್ಜರಿ ಪೋಸ್ಟರ್ ರಿಲೀಸ್ ಮಾಡಿರುವ ಸಮಿತಿಯವರು ಆ.31ರಂದು ಬೆಳಿಗ್ಗೆ 9 ಗಂಟೆಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುವುದು ಎಂದು […]

ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಸಿಎಂ ಜತೆ ಚರ್ಚೆ : ಅಶೋಕ್

ಬೆಂಗಳೂರು,ಆ.17- ಕಳೆದ 75 ವರ್ಷದಲ್ಲಿ ರಾಷ್ಟ್ರ ಧ್ವಜ ಹಾರಿಸಿರದ ಚಾಮರಾಜಪೇಟೆ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಿದೆ ಅದರಂತೆ ಮುಂಬರುವ ಗಣೇಶ ಹಬ್ಬವನ್ನು ಕೂಡಾ ಈ ಮೈದಾನದಲ್ಲಿ ಆಚರಿಸಲು ಸಿಎಂ ಜೊತೆ ಮಾತುಕತೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜ ಪೇಟೆ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆ ಮಾಡುವ ಕುರಿತು ಜಿಲ್ಲಾಡಳಿತಕ್ಕೆ ಮನವಿ ಪತ್ರಗಳು ಬಂದಿದ್ದು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು ಅಲ್ಲದೆ ಈಗ ಆ […]

ಚಾಮರಾಜಪೇಟೆ ಮೈದಾನದಲ್ಲಿ ಮೊದಲ ಬಾರಿಗೆ ಹಾರಾಡಿದ ರಾಷ್ಟ್ರಧ್ವಜ, ಮೊಳಗಿದ ರಾಷ್ಟ್ರಗೀತೆ

ಬೆಂಗಳೂರು,ಆ.15-ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಇದೆ ಮೊದಲ ಬಾರಿಗೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು. ಸಂಸದ ಪಿ.ಸಿ.ಮೋಹನ್ ಹಾಗೂ ಶಾಸಕ ಜಮೀರ್ ಆಹ್ಮದ್‍ಖಾನ್, ಮಾಜಿ ಶಾಸಕಿ ಪ್ರಮೀಳಾ ನೇಸರ್ಗಿ ಸಮ್ಮುಖದಲ್ಲಿ ಕಂದಾಯ ಇಲಾಖೆ ಉಪವಿಭಾಗಾಧಿಕಾರಿ ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣದ ನಂತರ ರಾಷ್ಟ್ರಗೀತೆ, ರೈತ ಗೀತಾ ಗಾಯನದ ಜೊತೆಗೆ ನಡೆದ ಸಾಂಸ್ಕøತಿಕ ಕಾರ್ಯಕ್ರಮಗಳು ನೋಡುಗರ ಮನಸೂರೆಗೊಂಡವು. ಚಾಮರಾಜಪೇಟೆ ಬಾಲಕಿಯ ಪ್ರೌಢಶಾಲೆ ಮಕ್ಕಳು ಒನಕೆ ಓಬವ್ವ […]

ರಿಪಬ್ಲಿಕ್ ಆಫ್ ಚಾಮರಾಜಪೇಟೆ ಕಟ್ಟಿಕೊಂಡಿದ್ದಾರಾ ಜಮೀರ್..?

ಬೆಂಗಳೂರು,ಆ.9- ಈದ್ಗಾ ಮೈದಾನದಲ್ಲಿ ಇಷ್ಟು ದಿನ ಧ್ವಜಾರೋಹಣ ನಡೆಸಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದ ಶಾಸಕ ಜಮೀರ್ ಅಹ್ಮದ್ ಖಾನ್ ಈಗ ಗಣೇಶೋತ್ಸವವನ್ನು ವಿರೋಧಿಸುತ್ತಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಸಿದ್ದರಾಮಯ್ಯ ಅವರ ಕೃಪಾಶೀರ್ವಾದದಿಂದ ಚಾಮರಾಜಪೇಟೆಯ ಈದ್ಗಾ ಮೈದಾನ ಅಂದಿನ ಲಾಲ್ ಚೌಕ್ ಆಗಿ ಪರಿವರ್ತನೆಯಾಗುತ್ತಿದೆಯೇ? ಎಂದು ಪ್ರಶ್ನಿಸಿದೆ. ಗಣೇಶ ಹಬ್ಬ ಕೇವಲ ಒಂದು ಧರ್ಮಕ್ಕೆ ಸೀಮಿತವಾದ ಹಬ್ಬವಲ್ಲ. ಗಣೇಶೋತ್ಸವದ ಮೂಲಕ ತಿಲಕರು ಸ್ವಾತಂತ್ರ್ಯ ಕಿಚ್ಚು ಹಚ್ಚಿದ್ದರು. ರಾಷ್ಟ್ರೀಯ ಜೋಡಣೆಗೆ ಬಹುಮುಖ್ಯ […]

ಈದ್ಗಾ ವಿವಾದ : ಭುಗಿಲೆದ್ದ ಆಕ್ರೋಶ, ಜಮೀರ್ ವಿರುದ್ಧ ಹಿಂದೂ ಸಂಘಟನೆಗಳು ಕಿಡಿ

ಬೆಂಗಳೂರು, ಆ.9- ಚಾಮರಾಜಪೇಟೆ ಮೈದಾನದ ವಿವಾದ ವಿಚಾರ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮೈದಾನದಲ್ಲಿ ಗಣೇಶ ಹಬ್ಬ ಸೇರಿದಂತೆ ಯಾವುದೇ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಗೆ ಅವಕಾಶ ನೀಡಲಾಗದು ಎಂದು ಹೇಳಿಕೆ ನೀಡಿರುವ ಶಾಸಕ ಜಮೀರ್ ಅಹಮ್ಮದ್ ಖಾನ್ ವಿರುದ್ಧ ಹಿಂದೂಪರ ಸಂಘಟನೆಗಳು ಮುಗಿಬಿದ್ದಿವೆ. ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ, ಕನ್ನಡ ರಾಜ್ಯೋತ್ಸವದಂತಹ ರಾಷ್ಟ್ರೀಯ ಮತ್ತು ರಾಜ್ಯ ಹಬ್ಬಗಳನ್ನು ಚಾಮರಾಜಪೇಟೆ ಮೈದಾನದಲ್ಲಿ ಅದ್ಧೂರಿಯಾಗಿ ಆಚರಿಸಲು ಅವಕಾಶವಿದೆ. ಆದರೆ, ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಗೆ ಅವಕಾಶ ನೀಡಲಾಗದು. ಇದಕ್ಕೆ ನಮ್ಮ ಸಮ್ಮತಿಯೂ ಇಲ್ಲ ಎಂದು ಶಾಸಕರು […]