ಕಚ್ಚಾಬಾಂಬ್ ತಯಾರಿಸಿ ಪ್ರಯೋಗ ಮಾಡುವ ವೇಳೆ ಸ್ಫೋಟ, ಇಬ್ಬರ ಸಾವು

ಕೋಲ್ಕತ್ತಾ, ಜು.18- ಕಚ್ಚಾಬಾಂಬ್ ತಯಾರಿಸಿ ಪ್ರಯೋಗ ಮಾಡುವ ವೇಳೆ ಸ್ಫೋಟ ಸಂಭವಿಸಿ ಇಬ್ಬರು ಮೃತಪಟ್ಟು ಒಬ್ಬರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಪಶ್ಚಿಮ ಬಂಗಾಳದ ಗೋಪಾಲಪುರದ ಮಾಲ್ಡಾಸ್ ಮಿನಿಚೌಕ್‍ನಲ್ಲಿ ನಿನ್ನೆ ಮಧ್ಯರಾತ್ರಿ 2.30ರ ಸುಮಾರಿನಲ್ಲಿ ದುರ್ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದಾಗ ಒಟ್ಟು ಮೂವರು ಗಾಯಗೊಂಡು ಬಿದ್ದಿರುವುದು ಪತ್ತೆಯಾಗಿದೆ. ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಇಬ್ಬರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಗಾಯಾಳುವನ್ನು ಮಾಲ್ಡಾ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳ ಪರಿಶೀಲನೆ ನಡೆಸಿದಾಗ ಒಟ್ಟು ನಾಲ್ಕು ಶಸ್ತ್ರಾಸ್ತ್ರಗಳು […]