ರಾಹುಲ್ ಧೋರಣೆಗೆ ದೀದಿ ಆಕ್ರೋಶ

ಕೋಲ್ಕತ್ತಾ,ಮಾ.20-ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಧೋರಣೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಟಿಎಂಸಿ ಪಕ್ಷದ ಆಂತರಿಕ ಸಭೆಯಲ್ಲಿ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್‍ನ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ರಾಹುಲ್ ಗಾಂಧಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಅತಿ ದೊಡ್ಡ ಟಿಆರ್‍ಪಿ ಎಂದು ತಿಳಿದುಕೊಂಡಿದ್ದಾರೆ. ಅಂತಹ ಧೋರಣೆಯನ್ನು ನಮ್ಮ ಪಕ್ಷ ಸಹಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ […]

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ -ಅಖಿಲೇಶ್ ಯಾದವ್ ಭೇಟಿ

ಕೋಲ್ಕತ್ತಾ,ಮಾ.13- ಪಶ್ಚಿಮ ಬಂಗಾಳದಲ್ಲಿ ತಮ್ಮ ಸಮಾಜವಾದಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಲು ಆಗಮಿಸುವ ಪಕ್ಷದ ಅಧಿನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮಾರ್ಚ್ 17ರಂದು ಟಿಎಂಸಿ ಅಧಿನಾಯಕಿ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಲಿದ್ದಾರೆ. ಮಾರ್ಚ್ 18 ರಿಂದ ಕೋಲ್ಕತ್ತಾದಲ್ಲಿ ಸಮಾಜವಾದಿ ಪಕ್ಷದ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಈ ವರ್ಷದ ಕೊನೆಯಲ್ಲಿ ಮೂರು ಉತ್ತರ ಭಾರತದ ಮೂರು ಪ್ರಮುಖ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಮತ್ತು 2024 ರಲ್ಲಿ […]

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ವಕ್ತಾರನ ಬಂಧನ

ಕೋಲ್ಕತ್ತಾ, ಮಾ.4- ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಕಾಂಗ್ರೆಸ್ ವಕ್ತಾರ ಕೌಸ್ತವ್ ಬಾಗ್ಚಿ ಅವರನ್ನು ಬಂಧಿಸಲಾಗಿದೆ. ನಗರದ ಬುರ್ಟೊಲ್ಲಾ ಪೊಲೀಸ್ ಠಾಣೆಯ ದೊಡ್ಡ ಪ್ರಮಾಣದ ಅಧಿಕಾರಿ ಮತ್ತು ಸಿಬ್ಬಂದಿಗಳ ಗುಂಪು ಬರಾಕ್‍ಪೋರ್ ಉತ್ತರ 24 ಪರಗಣ ಜಿಲ್ಲೆಯಯಲ್ಲಿರುವಬಾಗ್ಚಿ ಅವರ ನಿವಾಸದ ಮೇಲೆ ಮುಂಜಾನೆ 3.30 ರ ಸುಮಾರಿಗೆ ದಾಳಿ ನಡೆಸಿ, ಬಂಧಿಸಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಮಹಾರಾಷ್ಟ್ರದ ಆರು ಕೆಮ್ಮು ಸಿರಪ್ ತಯಾರಕ ಕಂಪನಿಗಳ ಪರವಾನಗಿ ಅಮಾನತು […]

ಕಾಂಗ್ರೆಸ್, ಎಡಪಕ್ಷಗಳ ಮೈತ್ರಿ ಸಹವಾಸ ಸಾಕು ; ದೀದಿ

ಕೋಲ್ಕತ್ತಾ, ಮಾ.3- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಏಕಾಂಗಿಯಾಗಿ ಹೋರಾಡಲಿದೆ. ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಟಿಎಂಸಿ ಹೇಳಿದೆ ಇದರಿಂದಾಗಿ ಪ್ರಾದೇಶಿಕ ಪಕ್ಷಗಳ ಮೈತ್ರಿಯೊಂದಿಗೆ 2024ರ ಲೋಕಸಭಾ ಚುನಾವಣೆಯಲ್ಲಿ ಒಗ್ಗೂಡಿ ಬಿಜೆಪಿ ವಿರುದ್ಧ ಹೋರಾಡಿ ಗೆಲ್ಲುವ ಕನಸು ಕಾಣುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ನಿರಾಶೆಯಾಗಿದೆ. ಬಿಜೆಪಿ ವಿರೋಧಿಗಳೆಂದು ಹೇಳಿಕೊಳ್ಳುತ್ತಿರುವ ಸಿಪಿಎಂ ಮತ್ತು ಕಾಂಗ್ರೆಸ್ ಪಕ್ಷಗಳು ಕೇಸರಿ ಪಕ್ಷದೊಂದಿಗೆ ಅಪವಿತ್ರ ಮೈತ್ರಿ ಮಾಡಿಕೊಂಡಿವೆ ಅಂತಹ ಪಕ್ಷದೊಂದಿಗೆ ನಮ್ಮ ಪಕ್ಷ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು […]

ಈಶಾನ್ಯ ರಾಜ್ಯಗಳಲ್ಲಿ CAA ಜಾರಿ ಮಾಡಲು ಬೀಡಲ್ಲ: ಮಮತಾ

ಶಿಲ್ಲಾಂಗ್,ಫೆ.23- ಹೊರಗಿನಿಂದ ಬಂದವರು ಈಶಾನ್ಯ ರಾಜ್ಯಗಳಲ್ಲಿ ಸಿಎಎ ಮತ್ತು ಎನ್‍ಆರ್‍ಸಿ ಹೇರಲು ನಮ್ಮ ಪಕ್ಷ ಅವಕಾಶ ನೀಡುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಫೆ.27ರಂದು ನಡೆಯಲಿರುವ ಮೇಘಾಲಯ ಚುನಾವಣೆ ಅಂಗವಾಗಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಅವರು, ಕಾನ್ರಾಡ್ ಸಂಗ್ಮಾ ನೇತೃತ್ವದ ಸರ್ಕಾರ ಯಾವುದೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳದೆ ವಿವಿಧ ಹಗರಣಗಳಲ್ಲಿ ತೊಡಗಿಸಿಕೊಂಡಿದೆ ಎಂದು ಅವರು ಆರೋಪ ಮಾಡಿದ್ದಾರೆ. […]

ದೀದಿ ನಮಗೆ ನಿಮ್ಮ ಆಶೀರ್ವಾದ ಬೇಕಿಲ್ಲ

ಕೋಲ್ಕತ್ತಾ,ಫೆ.2- ನಿಮ್ಮ ಆರ್ಶೀವಾದವಿಲ್ಲದೆ ನಾವು ಉತ್ತಮವಾಗಿರುತ್ತೇವೆ ಏಕೆಂದರೆ ನಾವು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಾರ್ಗದರ್ಶನಕ್ಕೆ ಒಗ್ಗಿಕೊಂಡಿದ್ದೇವೆ ಎಂದು ವಿಶ್ವಭಾರತಿ ವಿಶ್ವ ವಿದ್ಯಾಲಯ ಆಡಳಿತ ಮಂಡಳಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಸಡ್ಡು ಹೊಡೆದಿದೆ. ನೊಬೆಲ್ ಪ್ರಶಸ್ತಿ ಪುರಸ್ಕøತ ಅಮತ್ರ್ಯ ಸೇನ್ ಅವರು ಅಕ್ರಮವಾಗಿ ಭೂಮಿ ವಶಪಡಿಸಿಕೊಂಡಿದ್ದಾರೆ ಎಂಬ ವಿಶ್ವಭಾರತಿ ವಿಶ್ವವಿದ್ಯಾಲಯದ ಆರೋಪಕ್ಕೆ ಸಂಬಂಧಿಸಿದಂತೆ ಆರಂಭವಾದ ಗಲಾಟೆ ಇದೀಗ ಸಂಪೂರ್ಣ ರಾಜಕೀಯ ಕದನಕ್ಕೆ ತಿರುಗಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ […]