ದೆಹಲಿಯಲ್ಲಿ ಕದ್ದ ಕಾರನ್ನು ಬೆಂಗಳೂರಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

ಬೆಂಗಳೂರು, ಫೆ.18- ಐಷಾರಾಮಿ ಕಾರುಗಳನ್ನು ನವದೆಹಲಿಯಲ್ಲಿ ಕಳ್ಳತನ ಮಾಡಿ ನಗರಕ್ಕೆ ತಂದು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಒಬ್ಬಾತನನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದು ಮತ್ತೊಬ್ಬನಿಗಾಗಿ ಶೋಧ ಕೈಗೊಂಡಿದ್ದಾರೆ. ಆರೋಪಿಯಿಂದ 60 ಲಕ್ಷ ಬೆಲೆಯ 8 ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡು ವಿಚಾರಣೆ ಮುಂದುವರೆಸಿದ್ದಾರೆ. ಈ ಇಬ್ಬರು ಸೇರಿಕೊಂಡು ದೆಹಲಿಯಲ್ಲಿ ಐಷಾರಾಮಿ ಕಾರುಗಳನ್ನು ಕಳ್ಳತನ ಮಾಡಿಕೊಂಡು ಬೆಂಗಳೂರಿಗೆ ತಂದು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ಈ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ […]