ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜು

ಬೆಂಗಳೂರು,ಆ.13- ಅಮೃತ ಮಹೋತ್ಸವದ ನಿಮಿತ್ತ ಆ.15ರಂದು ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ.15 ರಂದು 8.55ಕ್ಕೆ ಮುಖ್ಯಮಂತ್ರಿಗಳು ಮೈದಾನಕ್ಕೆ ಆಗಮಿಸಲಿದ್ದು, 9 ಗಂಟೆಗೆ ಸರಿಯಾಗಿ ಧ್ವಜಾರೋಹಣ ನಡೆಸಲಿದ್ದಾರೆ ಎಂದು ಅವರು ವಿವರಿಸಿದರು. ಧ್ವಜಾರೋಹಣದ ನಂತರ ಮುಖ್ಯಮಂತ್ರಿಗಳು ತೆರೆದ ಜೀಪ್ನಲ್ಲಿ ಪರೇಡ್ ಪರಿವೀಕ್ಷಣೆ ಹಾಗೂ ಗೌರವ ರಕ್ಷೆ ಸ್ವೀಕರಿಸಲಿದ್ದಾರೆ. ಕೆಎಸ್ಆರ್ಪಿ, ಸಿಆರ್ಪಿಎಫ್, […]