ಸಿಎಂ ಬೊಮ್ಮಾಯಿ ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು,ಜ.11-ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವೈದ್ಯರ ಸಲಹೆ ಮೇರೆಗೆ ಇಂದು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಘು ರೋಗಲಕ್ಷಣಗಳಿದ್ದು, ಮನೆಯಲ್ಲೇ ಐಸೋಲೇಟ್ ಆಗಿದ್ದ ಮುಖ್ಯಮಂತ್ರಿಗಳನ್ನು ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದು, ಕೆಲವೊಂದು ತಪಾಸಣೆ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ. ನಿನ್ನೆ ಮುಖ್ಯಮಂತ್ರಿಗಳಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಇಂದು ಅವರ ಮಗ ಮತ್ತು ಸೊಸೆಗೂ ಕೊರೊನಾ […]