ಜೈಲಿಗೆ ಹಾಕಬಹುದು ನನ್ನ ಉತ್ಸಾಹ ಕುಂದಿಸಲು ನಿಮ್ಮಿಂದ ಸಾಧ್ಯವಿಲ್ಲ : ಮನೀಶ್ ಸಿಸೋಡಿಯಾ

ನವದೆಹಲಿ,ಮಾ.11-ಸರ್ ನನ್ನನ್ನು ಜೈಲಿಗೆ ಹಾಕುವ ಮೂಲಕ ನೀವು ನನಗೆ ತೊಂದರೆ ನೀಡಬಹುದು ಆದರೆ, ನನ್ನ ಉತ್ಸಾಹವನ್ನು ನಿಮ್ಮಿಂದ ಮುರಿಯಲು ಸಾಧ್ಯವಿಲ್ಲ ಎಂದು ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಆಮ್ ಆದ್ಮಿ ಪಕ್ಷದ ಮುಖಂಡ ಮನೀಶ್ ಸಿಸೋಡಿಯಾ ಟ್ವಿಟ್ ಮಾಡಿದ್ದಾರೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಫೆಬ್ರವರಿ 26 ರಂದು ಬಂಧಿತರಾಗಿರುವ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರು ಇಂದು ಟ್ವೀಟ್ ಮಾಡಿ, ತನಿಖಾ ಸಂಸ್ಥೆಯು ತನ್ನನ್ನು ತಮ್ಮ ಕಸ್ಟಡಿಯಲ್ಲಿಟ್ಟುಕೊಂಡಿದೆ ಆದರೆ ಅವರು ನನ್ನ […]

ಇಡಿ ಅಧಿಕಾರಿಗಳಿಂದ ಮತ್ತೆ ಸಿಸೋಡಿಯಾ ವಿಚಾರಣೆ

ನವ ದೆಹಲಿ,ಮಾ.9- ಅಬಕಾರಿ ನೀತಿ ಅಕ್ರಮಗಳ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿ ತಿಹಾರ್ ಜೈಲಿನಲ್ಲಿರುವ ಎಎಪಿ ಮುಖಂಡ ಮನೀಶ್ ಸಿಸೋಡಿಯಾ ಅವರನ್ನು ಇಂದು ಇಡಿ ಅಧಿಕಾರಿಗಳು ಎರಡನೇ ಸುತ್ತಿನ ವಿಚಾರಣೆಗೊಳಪಡಿಸಿದರು. ಮೊನ್ನೆಯಷ್ಟೇ ಸಿಸೋಡಿಯಾ ಅವರನ್ನು ವಿಚಾರಣೆಗೆ ಒಳಪಡಿಸಿದ್ದ ಇಡಿ ಅಧಿಕಾರಿಗಳು ಇಂದು ಮತ್ತೆ ಹಲವಾರು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ. 2021-22ರ ದೆಹಲಿ ಮದ್ಯ ಅಥವಾ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಫೆಬ್ರವರಿ 26 ರಂದು ಸಿಬಿಐ […]

ಜೈಲಿನಲ್ಲಿ ಒಂದು ದಿನ ಕಳೆದ ಸಿಸೋಡಿಯಾ

ನವದೆಹಲಿ,ಮಾ.7-ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಿಹಾರ್ ಜೈಲಿನಲ್ಲಿ ಒಂದು ದಿನ ಕಳೆದಿದ್ದಾರೆ. ಸಿಸೋಡಿಯಾ ಅವರನ್ನು ಹಿರಿಯ ನಾಗರೀಕರ ಸೆಲ್‍ನಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದ್ದು ಅವರಿರುವ ಸೆಲ್‍ಗೆ ಸಿಸಿಟಿವಿ ಕಣ್ಗಾವಲು ಹಾಕಲಾಗಿದೆ ಎಂದು ತಿಹಾರ್ ಜೈಲು ಅಧಿಕಾರಿಗಳು ತಿಳಿಸಿದ್ದಾರೆ. ಸಿಸೋಡಿಯಾ ಅವರನ್ನು ತಿಹಾರ್ ಜೈಲು ಸಂಖ್ಯೆ 1 ರ ಸಿಸಿಟಿವಿಗಳನ್ನು ಅಳವಡಿಸಲಾಗಿರುವ ವಾರ್ಡ್ ಸಂಖ್ಯೆ 9 ರಲ್ಲಿ ಇರಿಸಲಾಗಿದೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ, ಸಿಸೋಡಿಯಾ ಅವರಿರುವ ಅದೇ ವಾರ್ಡ್‍ನಲ್ಲಿ ನೆರೆಹೊರೆಯ […]

ಸುಪ್ರೀಂ ಕೋರ್ಟ್ ಕದ ತಟ್ಟಿದ ಸಿಸೋಡಿಯಾ

ನವದೆಹಲಿ,ಫೆ.28- ಮದ್ಯ ನೀತಿ ಪ್ರಕರಣದಲ್ಲಿ ಸಿಬಿಐ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ದೆಹಲಿ ನ್ಯಾಯಾಲಯ ಸಿಸೋಡಿಯಾ ಅವರನ್ನು ಐದು ದಿನಗಳ ಕಾಲ ಸಿಬಿಐ ಕಸ್ಟಡಿಗೆ ವಹಿಸಿರುವ ನಂತರ ಸಿಸೋಡಿಯಾ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಭ್ರಷ್ಟಾಚಾರ ನಡೆದಿರುವುದರ ಬಗ್ಗೆ ವಿಚಾರಣೆ ನಡೆಸಲು ಹೆಚ್ಚಿನ ಕಾಲವಕಾಶ ಬೇಕಾಗುತ್ತದೆ ಎಂದು ಸಿಬಿಐ ದೆಹಲಿ ನ್ಯಾಯಾಲಯಕ್ಕೆ ಮಾಡಿಕೊಂಡ ಮನವಿಯನ್ನು ಪರಿಗಣಿಸಿ ಸಿಸೋಡಿಯಾ ಅವರಿಗೆ ಜಾಮೀನು ನೀಡಲು […]

ಸಿಸೋಡಿ ಬಂಧನ ವಿರೋಧಿಸಿ ದೇಶಾದ್ಯಂತ ಆಪ್ ಪ್ರತಿಭಟನೆ

ನವದೆಹಲಿ,ಫೆ.27- ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೆ ಒಳಗಾಗಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾರ ಪರ ಆಮ್ ಆದ್ಮಿ ಪಕ್ಷ ದೇಶಾದ್ಯಂತ ಪ್ರತಿಭಟನೆ ನಡೆಸಿದೆ. ಈ ನಡುವೆ ಮನೀಶ್ ಬಂಧನಕ್ಕೆ ಬಹಳಷ್ಟು ಸಿಬಿಐ ಅಧಿಕಾರಿಗಳು ವಿರೋಧ ವ್ಯಕ್ತ ಪಡಿಸಿದ್ದರು ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲಿ, ಬಿಜೆಪಿ ಮತ್ತು ಎಎಪಿ ಕೇಂದ್ರ ಕಚೇರಿಗಳೆರಡೂ ಇರುವ ಮಧ್ಯ ದೆಹಲಿಯ ಡಿಡಿಯು ಮಾರ್ಗದಲ್ಲಿ ಭಾರೀ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು. ಸಿಸೋಡಿಯಾ ಬಂಧನದ ದಿನವನ್ನು […]

ಸಿಸೋಡಿಯಾಗೆ ಮುಳುವಾದ ಡಿಜಿಟಲ್ ಸಾಧನ

ನವದೆಹಲಿ,ಫೆ.27- ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಲು ಕಾರಣವಾದದ್ದೇ ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡ ಡಿಜಿಟಲ್ ಸಾಧನ ಎನ್ನುವುದು ಇದೀಗ ಬಹಿರಂಗಗೊಂಡಿದೆ. ಈಗ ರದ್ದುಗೊಂಡಿರುವ ದೆಹಲಿ ಮದ್ಯ ಮಾರಾಟ ನೀತಿ ಜಾರಿಗೆ ತರುವಲ್ಲಿ ಸಿಸೋಡಿಯಾ ಸಾಕಷ್ಟು ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಆರೋಪದ ಮೇಲೆ ವಿಚಾರಣೆ ನಡೆಸಿದ ಸಿಬಿಐ ಕೊನೆಗೆ ಅವರನ್ನು ಬಂಧಿಸಿದೆ. ಕಳೆದ ಆಗಸ್ಟ್ 19 ರಂದು ಅಬಕಾರಿ ಇಲಾಖೆಯಲ್ಲಿ ನಡೆಸಿದ ಶೋಧದ ಸಮಯದಲ್ಲಿ ಡಿಜಿಟಲ್ ಸಾಧನವನ್ನು ವಶಪಡಿಸಿಕೊಳ್ಳಲಾಗಿದೆ. ಅದನ್ನು […]

ದೆಹಲಿ ಡಿಸಿಎಂ ವಿರುದ್ಧ ಸಿಬಿಐ ತನಿಖೆಗೆ ಗ್ರೀನ್ ಸಿಗ್ನಲ್

ನವದೆಹಲಿ,ಫೆ.22- ಆಮ್ ಆದ್ಮಿ ಪಕ್ಷಕ್ಕೆ ಮತ್ತೊಂದು ಕಂಟಕ ಎದುರಾಗಿದೆ. ಪ್ರತಿಪಕ್ಷಗಳ ಮಾಹಿತಿಗಳಿಗೆ ಕನ್ನ ಹಾಕಿದ ಆರೋಪದ ಮೇಲೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ವಿರುದ್ಧದ ಸಿಬಿಐ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಗ್ರೀನ್ ಸಿಗ್ನಲ್ ನೀಡಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಸಿಬಿಐ ಈಗಾಗಲೇ ಸಿಸೋಡಿಯಾ ಅವರನ್ನು ವಿಚಾರಣೆಗೊಳಪಡಿಸಲು ಮುಂದಾಗಿದೆ ಕಳೆದ ಭಾನುವಾರ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ,ಅವರು ಬಜೆಟ್ ಸಿದ್ದಪಡಿಸುತ್ತಿರುವುದರಿಂದ ಸದ್ಯ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ನುಣುಚಿಕೊಂಡಿದ್ದರು, ಇದರ ಮಧ್ಯೆ, ಮಾಹಿತಿ […]

ವಿಚಾರಣೆಗೆ ಕಾಲವಕಾಶ ಕೋರಿದ ಮನೀಷ್ ಸಿಸೋಡಿಯಾ

ನವದೆಹಲಿ,ಫೆ.19 – ನಗರಾಡಳಿತದ ಬಜೆಟ್ ಅಧಿವೇಶನ ನಡೆಯುತ್ತಿರುವ ಹಿನ್ನೆಲೆ, ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗಲು ಕಾಲವಕಾಶ ನೀಡುವಂತೆ ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಸಿಬಿಐಗೆ ಮನವಿ ಮಾಡಿದ್ದಾರೆ. ದೆಹಲಿಯ ಅಬಕಾರಿ ನೀತಿಯಲ್ಲಿ ಅಕ್ರಮ ನಡೆಸಿರುವ ಬಗ್ಗೆ ತನಿಖೆ ನಡೆಸಿದ್ದ ಸಿಬಿಐ 3 ತಿಂಗಳ ಹಿಂದೆ ಚಾರ್ಜ್‍ಶೀಟ್ ಸಲ್ಲಿಸಿತ್ತು. ಭಾನುವಾರ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್ ನೀಡಿತ್ತು. ಆದರೆ ಎರಡು ವಾರಗಳ ಬಳಿಕ ಹಾಜರಾಗಲು ಅವಕಾಶ ನೀಡುವಂತೆ ಸಿಸೋಡಿಯಾ ಸಿಬಿಐಗೆ ಮನವಿ ಮಾಡಿದ್ದಾರೆ. ಕೋಟಿ […]

ದೆಹಲಿ ಉಪಮುಖ್ಯಮಂತ್ರಿಗೆ ಸಿಬಿಐ ನೋಟೀಸ್

ನವದೆಹಲಿ,ಫೆ.18- ಆಪ್ ಪಕ್ಷದ ಮುಖಂಡ ಹಾಗೂ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸಿಬಿಐ ನೋಟೀಸ್ ಜಾರಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಸಿದ ಸುಮಾರು ಮೂರು ತಿಂಗಳ ನಂತರ ಸಿಬಿಐ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ವಿಚಾರಣೆಗೆ ಕರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಬಿಐ ಸಲ್ಲಿಸಿರುವ ಚಾರ್ಜ್‍ಶೀಟ್‍ನಲ್ಲಿ ಸಿಸೋಡಿಯಾ ಅವರ ಹೆಸರಿಲ್ಲದಿದ್ದರೂ ಅವರನ್ನು ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ಬಂಧಿತ ಉದ್ಯಮಿಗಳಾದ ವಿಜಯ್ […]

ಶಿಕ್ಷಕರನ್ನು ಅಪಮಾನಿಸುತ್ತಿರುವ ಲೆಫ್ಟಿನೆಂಟ್ ಗೌರ್ನರ್ : ಸಿಸೋಡಿಯ ಆಕ್ರೋಶ

ನವದೆಹಲಿ,ಜ.21- ದೆಹಲಿಯ ಲೆಫ್ಟಿನೆಂಟ್ ಗೌರ್ನರ್ ವಿ.ಕೆ.ಸಕ್ಸೇನಾ ಶಿಕ್ಷಣ ಇಲಾಖೆಯ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರನ್ನು ಅಪಹಾಸ್ಯ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕಿಡಿಕಾರಿದ್ದಾರೆ. ಸಕ್ಸೆನಾ ಅವರ ಹೇಳಿಕೆ ರಾಜಕೀಯ ದುರುದ್ದೇಶದಿಂದ ಕೂಡಿದೆ. ಅವರ ಸುಳ್ಳು ಆರೋಪಗಳು ದೆಹಲಿಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಅವಮಾನ ಮಾಡಿವೆ ಎಂದು ಸಿಸೋಡಿಯಾ ಬರೆದಿರುವ ಪತ್ರದಲ್ಲಿ ಅಸಮಧಾನ ವ್ಯಕ್ತಪಡಿಸಿದ್ದಾರೆ. ದೆಹಲಿಯ ಶಿಕ್ಷಣ ಇಲಾಖೆಯಲ್ಲಿ ಯಾವುದೇ ಕೆಲಸ ನಡೆದಿಲ್ಲ ಎಂದು ಅವರು ಹೇಳಿದ್ದಾರೆ. ನಮ್ಮ ಕೆಲಸವನ್ನು […]