ಮಂತ್ರಾಲಯದ ರಾಯರ ಸನ್ನಿದಿಯಲ್ಲಿ 2023ರ ಚುನಾವಣೆ ಕುರಿತು ಭವಿಷ್ಯ ನುಡಿದ ಬಿಎಸ್ವೈ

ಮಂತ್ರಾಲಯ,ಆ.11- ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದ್ದು, ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಅಧಿಕಾರದಲ್ಲಿ ಮುಂದುವರೆಯುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಬೊಮ್ಮಾಯಿ ಅವರ ನಾಯಕತ್ವ ಬದಲಾವಣೆಯಾಗಲಿದೆ ಎಂಬ ಗುಸುಗುಸು ಹಬ್ಬಿರುವ ಸಂದರ್ಭದಲ್ಲೇ ಸ್ಪಷ್ಟನೆ ನೀಡಿರುವ ಅವರು ಹಾಲಿ ಮುಖ್ಯಮಂತ್ರಿ ನಾಯಕ್ವದಲ್ಲೇ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಕನಸು ನನಸಾಗುವುದಿಲ್ಲ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. 2022 ಆಗಸ್ಟ್ 21ರಿಂದ […]