2Aಗೆ ಸೇರ್ಪಡೆ ಮಾಡದಿದ್ದರೆ ಭಾರೀ ಹೋರಾಟ : ಮರಾಠ ಸಮುದಾಯ ಎಚ್ಚರಿಕೆ

ಬೆಂಗಳೂರು, ನ.5- ಮರಾಠ ಸಮುದಾಯವನ್ನು ಹಿಂದುಳಿದ ವರ್ಗ 2ಎ ಗೆ ಸೇರ್ಪಡೆ ಮಾಡಿ ಮೀಸಲಾತಿ ಸೌಲಭ್ಯ ಕಲ್ಪಿಸದಿದ್ದರೆ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಅವೇಶನ ಸಂದರ್ಭದಲ್ಲಿ ಸುವರ್ಣ ಸೌಧಕ್ಕೆ 25 ಸಾವಿರ ಮರಾಠಿಗರು ಮುತ್ತಿಗೆ ಹಾಕಿ ಭಾರೀ ಹೋರಾಟ ನಡೆಸುವುದಾಗಿ ಕರ್ನಾಟಕ ಕ್ಷತ್ರೀಯ ಮರಾಠ ಮಹಾ ಒಕ್ಕೂಟ ಎಚ್ಚರಿಕೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ರಾಜ್ಯಾಧ್ಯಕ್ಷ ಶಾಮ ಸುಂದರ್ ಗಾಯಕ್ವಾಡ್, ಮೀಸಲಾತಿ ಸೇರಿದಂತೆ ನಮ್ಮ ಹಲವು ಬೇಡಿಕೆಗಳನ್ನು ಈಡೇರಿಸಬೇಕು. ದಶಕಗಳಿಂದ ನಮ್ಮ ಸಮುದಾಯವನ್ನು 2ಎ ಗೆ ಸೇರ್ಪಡೆ ಮಾಡಬೇಕೆಂದು […]