‘ಹಿಂದೂ’ ನಂತರ ‘ಸಾಂಭಾಜಿ’ ವಿವಾದಲ್ಲಿ ಸತೀಶ್ ಜಾರಕಿಹೊಳಿ

ಮುಂಬೈ,ನ.11- ಛತ್ರಪತಿ ಸಾಂಭಾಜಿ ಮಹಾರಾಜ್ ಕುರಿತಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಆಕ್ಷೇಪಾರ್ಹ ಹೇಳಿಕೆಗೆ ರಾಹುಲ್‍ಗಾಂಧಿ ಅವರ ಸಮ್ಮತಿ ಇದೆಯೇ ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರಶ್ನಿಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಮಾನವ ಬಂಧುತ್ವ ವೇದಿಕೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಳೆದ ಭಾನುವಾರ ಮಾತನಾಡಿದ ಸತೀಶ್ ಜಾರಕಿಹೊಳಿ ಅವರ ಹೇಳಿಕೆಗಳು ವ್ಯಾಪಕ ವಿವಾದಕ್ಕೆ ಕಾರಣವಾಗಿದೆ. ಇದೇ ಕಾರ್ಯಕ್ರಮದಲ್ಲಿ ಹಿಂದೂ ಧರ್ಮದ ಕುರಿತು ಸತೀಶ್ ಜಾರಕಿಹೊಳಿ ಅವರು ನೀಡಿದ ಹೇಳಿಕೆ ರಾಜ್ಯದಲ್ಲೇ ಅಷ್ಟೇ ಅಲ್ಲ ರಾಷ್ಟ್ರ […]