ನಾಳೆಯಿಂದ ಸರ್ಕಾರಿ ಕಚೇರಿಗಳು ಬಂದ್..?

ಬೆಂಗಳೂರು,ಫೆ.28- ಕೂಡಲೇ ಏಳನೇ ವೇತನ ಆಯೋಗದ ವರದಿಯನ್ನು ಅನುಷ್ಠಾನ ಮಾಡುವುದು ಹಾಗೂ ಹೊಸ ಪಿಂಚಣಿ ವ್ಯವಸ್ಥೆ ರದ್ದುಪಡಿಸಿ ಹಳೆಯ ವ್ಯವಸ್ಥೆಯನ್ನೇ ಮುಂದುವರೆಸುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸರ್ಕಾರಿ ನೌಕರರು ನಾಳೆಯಿಂದ ಕಚೇರಿಯನ್ನು ಬಂದ್‍ಮಾಡಿ ಅರ್ನಿಷ್ಟಾವ ಮುಷ್ಕರ ನಡೆಸಲಿದ್ದಾರೆ. ಇದರಿಂದಾಗಿ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದ್ದು, ಕಚೇರಿಗೆ ಬರುವ ನೌಕರರನ್ನು ತಡೆ ಹಿಡಿಯುವುದು ಇಲ್ಲವೇ ಬಲವಂತವಾಗಿ ಮುಷ್ಕರದಲ್ಲಿ ಪಾಲ್ಗೊಳ್ಳಬೇಕೆಂದು ಯಾವುದೇ ಸಂಘಟನೆಗಳು ಒತ್ತಡ ಹಾಕಬಾರದೆಂದು ರಾಜ್ಯ ಸರ್ಕಾರ ಎಚ್ಚರಿಕೆ ಕೊಟ್ಟಿದೆ. ಇದರ ನಡುವೆ ಮುಖ್ಯಮಂತ್ರಿ […]

ಮಾ.1ರಿಂದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ

ಬೆಂಗಳೂರು,ಫೆ.25- ರಾಜ್ಯದಲ್ಲಿ ಮತ್ತೆ ಶತಾಯಗತಾಯ ಅಧಿಕಾರ ಹಿಡಿಯಲೇ ಬೇಕೆಂದು ದೃಢಸಂಕಲ್ಪ ಮಾಡಿರುವ ಬಿಜೆಪಿ ಮಾ.1ರಿಂದ ರಾಜ್ಯದ 224 ಕ್ಷೇತ್ರಗಳಲ್ಲಿ ನಾಲ್ಕು ತಂಡಗಳಾಗಿ ವಿಜಯ ಸಂಕಲ್ಪ ರಥಯಾತ್ರೆ ಮೂಲಕ ಚುನಾವಣೆಗೆ ಅಧಿಕೃತ ರಣಕಹಳೆ ಮೊಳಗಿಸಲಿದೆ. ಮಾ.1ರಿಂದ ಮಾ.22ರವರೆಗೆ ರಾಜ್ಯದ 224 ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಡಿ.ವಿ.ಸದಾನಂದಗೌಡ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನೇತೃತ್ವದಲ್ಲಿ ರಾಜ್ಯದ ಉದ್ದಗಲಕ್ಕೂ ವಿಜಯ […]

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮುಷ್ಕರಕ್ಕೆ ಸಜ್ಜಾದ ಬಿಬಿಎಂಪಿ ನೌಕರರು

ಬೆಂಗಳೂರು,ಫೆ.23- ಬರುವ ಮಾರ್ಚ್ ಒಂದರಿಂದ ಬಿಬಿಎಂಪಿ ಅಧಿಕಾರಿಗಳು ಮತ್ತು ನೌಕರರು ಅರ್ನಿಷ್ಠಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ವೇತನ ಪರಿಷ್ಕರಣೆ, ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವುದು, ಪಾಲಿಕೆ ಸಿಬ್ಬಂದಿ ಕುಟುಂಬ ವರ್ಗದವರಿಗೆ ನಗರದ ಪ್ರಮುಖ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ಕಲ್ಪಿಸುವುದು ಸೇರಿದಂತೆ ಇನ್ನಿತರ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್‍ರಾಜ್ ತಿಳಿಸಿದ್ದಾರೆ. ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ನಾವು ಈಗಾಗಲೇ ಬಿಬಿಎಂಪಿ ಮುಖ್ಯ […]