ಮಾರ್ಚ್ 3ಕ್ಕೆ ಬೆಂಗಳೂರಿನಲ್ಲಿ ಅಂತ್ಯವಾಗಲಿದೆ ಮೇಕೆದಾಟು ಪಾದಯಾತ್ರೆ

ಬೆಂಗಳೂರು, ಫೆ.23- ಮೇಕೆದಾಟು ಯೋಜನೆ ಶೀಘ್ರ ಆರಂಭಕ್ಕೆ ಒತ್ತಾಯಿಸಿ ಮರು ಆರಂಭಗೊಳ್ಳುತ್ತಿರುವ ಪಾದಯಾತ್ರೆ ಮಾರ್ಚ್ 3ಕ್ಕೆ ಬೆಂಗಳೂರಿನಲ್ಲಿ ಅಂತ್ಯವಾಗಲಿದೆ. ಫೆ.27ರಂದು ಬೆಳಗ್ಗೆ 9 ಗಂಟೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನ ಮಂಡಲದ ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ಮಾಜಿ ಮುಖ್ಯಮಂತ್ರಿಗಳಾದ ವೀರಪ್ಪ ಮೊಯ್ಲಿ ಸೇರಿದಂತೆ ಅನೇಕ ನಾಯಕರು ಭಾಗವಹಿಸಲಿದ್ದಾರೆ. ಪಾದಯಾತ್ರೆ ಯಶಸ್ಸಿಗೆ ಪಣ ತೊಟ್ಟಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿನ್ನೆ ಮಂಡ್ಯ […]