ನಕಲಿ ಅಂಕಪಟ್ಟಿ ದಂಧೆ: ಕಾಲೇಜು, ಶಿಕ್ಷಣ ಸಂಸ್ಥೆಗಳ ಮೇಲೆ ಸಿಸಿಬಿ ದಾಳಿ

ಬೆಂಗಳೂರು,ಜ.27- ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ಸಂಬಂಧಪಟ್ಟ ವಿವಿಧ ಕೋರ್ಸ್‍ಗಳ ನಕಲಿ ಅಂಕಪಟ್ಟಿಗಳನ್ನು ನೀಡುತ್ತಿದ್ದ ಜಾಲದ ಐದು ಸಂಸ್ಥೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಬ್ಬನನ್ನು ಬಂಧಿಸಿ, 6800ಕ್ಕಿಂತಲೂ ಅಧಿಕ ನಕಲಿ ಅಂಕಪಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ. ರಾಜಾಜಿನಗರದ ನ್ಯೂ ಕ್ವೆಸ್ಟ್ ಟೆಕ್ನಾಲಜಿಸ್, ಜೆಪಿನಗರದ ಎಸ್‍ಸಿಸ್ಟಮ್ ಕ್ವೆಸ್ಟ್, ಭದ್ರಪ್ಪ ಲೇಔಟ್‍ನ ಆರೂಹಿ ಇನ್ಸ್‍ಟ್ಯೂಟ್, ದಾಸರಹಳ್ಳಿಯ ವಿಶ್ವಜ್ಯೋತಿ ಕಾಲೇಜು ಮತ್ತು ವಿಜಯನಗರದ ಬೆನಕ ಕರೆಸ್ಪಾಂಡೆನ್ಸ್ ಕಾಲೇಜು ಮೇಲೆ ಏಕಕಾಲದಲ್ಲಿ ಸಿಸಿಬಿ ಪೊಲೀಸ್ ತಂಡ ದಾಳಿ ಮಾಡಿ ನಕಲಿ […]