ಮಾರ್ಕೋನಹಳ್ಳಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವರ ಭೇಟಿ

ತುಮಕೂರು, ಆ.12- ಸತತ ಮಳೆಯಿಂದ ಜಿಲ್ಲೆಯ ವಿವಿಧ ಕೆರೆ-ಕಟ್ಟೆಗಳು, ಅಣೆಕಟ್ಟೆಗಳು ತುಂಬಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯ ಜಲಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ ಅವರು ಜಿಲ್ಲೆಯ ಕುಣಿಗಲ್ ತಾಲೂಕಿನ ಮಾರ್ಕೋನಹಳ್ಳಿ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಜ್ಯದಲ್ಲಿ ಸತತವಾಗಿ ಮುಂಗಾರು ಮಳೆಯಾಗುತ್ತಿರುವ ಹಾಗೆಯೇ ತುಮಕೂರು ಜಿಲ್ಲೆಯಲ್ಲಿಯೂ ನಿರಂತರವಾಗಿ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಹುಟ್ಟುವ ಶಿಂಸಾ, ಜಯಮಂಗಲ, ಗರುಡಧ್ವಜ, ಉತ್ತರ ಪಿನಾಕಿನಿ, ದಕ್ಷಿಣ ಪಿನಾಕಿನಿ ನದಿಗಳು ತುಂಬಿ ಹರಿದ ಪರಿಣಾಮ ನದಿಪಾತ್ರಗಳ ಕೆರೆ-ಕಟ್ಟೆಗಳು ಸಹ ತುಂಬಿ ಕೋಡಿ ಬಿದ್ದಿವೆ. ಶಿಂಷಾ […]