ಮಹಿಳೆಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ, ಪ್ರಮುಖ ಆರೋಪಿ ಅರೆಸ್ಟ್

ಉತ್ತರಪ್ರದೇಶ,ಸೆ.25- ವಿವಾಹಿತ ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಭಾರಮಂತಿ ಜಿಲ್ಲೆಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಡೊಸರೈ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿವಾಹಿತ ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಗ್ರಾಮದ ವ್ಯಕ್ತಿಯೊಬ್ಬ ಮಹಿಳೆಗೆ ಆಮಿಷವೊಡ್ಡಿ ಆಕೆಯ ಮೊಬೈಲ್ ನಂಬರ್ ಪಡೆದುಕೊಂಡು ಮಾತನಾಡಲು ಆರಂಭಿಸಿದ್ದಾನೆ. ಸೆ.17ರಂದು ಮನೆಗೆ ಬಂದು ನಿನ್ನ ಪತಿ ಕರೆದುಕೊಂಡು ಬರುವಂತೆ ತಿಳಿಸಿದ್ದಾನೆಂದು ಹೇಳಿ ಮಹಿಳೆಯನ್ನು ಊರಿನಿಂದ ಹೊರಗೆ ಕರೆದೊಯ್ದಿದ್ದಾನೆ. […]