ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ 22ರಂದು ಬೃಹತ್ ರ‍್ಯಾಲಿ

ಬೆಂಗಳೂರು, ಜ.5- ಕೊರೊನಾ ರಾಜ್ಯಾದ್ಯಂತ ತೀವ್ರವಾಗಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಜ.22ರಂದು ಕನ್ನಡ ಒಕ್ಕೂಟ ಹಮ್ಮಿಕೊಂಡಿದ್ದ ಕರ್ನಾಟಕ ಬಂದ್ ಬದಲಾಗಿ ಬೃಹತ್ ರ‍್ಯಾಲಿ ನಡೆಸಲು ತೀರ್ಮಾನಿಸಲಾಗಿದೆ. ಕನ್ನಡ ಒಕ್ಕೂಟದ ಮುಖಂಡರಾದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು, ಕೆ.ಆರ್.ಕುಮಾರ್, ಮಂಜುನಾಥ್ ದೇವು, ದೀಪಕ್, ಗಿರೀಶ್‍ಗೌಡ ಮುಂತಾದವರ ನೇತೃತ್ವದಲ್ಲಿ ಇಂದು ಸಭೆ ನಡೆಸಿ ಉದ್ದೇಶಿತ ಬಂದ್ ಬದಲಾಗಿ ಇಂದು ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲಾ ಕಚೇರಿಗಳ ಎದುರು ಪ್ರತಿಭಟನಾ ರ್ಯಾಲಿ […]