ಬಿಜೆಪಿಗೆ ನುಂಗಲಾರದ ಬಿಸಿತುಪ್ಪವಾದ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ

ಬೆಂಗಳೂರು,ಜು.30- ಹಿಂದೂ ಧರ್ಮದ ರಕ್ಷಣೆಯ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿಗೆ ಇದೀಗ ಪಕ್ಷದ ಕಾರ್ಯಕರ್ತರ ಕಗ್ಗೊಲೆ ಹಾಗೂ ಸಾಮೂಹಿಕ ರಾಜೀನಾಮೆ ನುಂಗಲಾರದ ಬಿಸಿತುಪ್ಪವಾಗಿ ಪರಿಣಮಿಸಿದೆ.ಕಮಲಪಡೆಯನ್ನು ಎಷ್ಟರ ಮಟ್ಟಿಗೆ ನಿದ್ದೆಗೆಡುವಂತೆ ಮಾಡಿದೆ ಎಂದರೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಪಕ್ಷದ ಸಾಮಾಜಿಕ ಮಾಧ್ಯಮ ನಿರ್ವಹಣೆ ಸೇರಿದಂತೆ, ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳ ರಾಜೀನಾಮೆ ನೀಡುತ್ತಿರುವುದು ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ ಎಂಬ ಆತಂಕ ಎದುರಾಗಿದೆ. ಕಾರ್ಯಕರ್ತರ ಪಕ್ಷವೆಂದು ಹೇಳಿಕೊಂಡು […]